ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿಗೆ ಪಾಟೀಲ ಚಾಲನೆ

ಬಾಗಲಕೋಟೆ :  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಶ್ರಯದಲ್ಲಿ ನವನಗರದ ಟಿ.ಎ.ಪಿ.ಸಿ.ಎಂ.ಎಸ್ ಸಂಘದಿಂದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಚಾಲನೆ ನೀಡಿದರು.

ನವನಗರದ ಎಪಿಎಂಸಿ ಯಾರ್ಡನಲ್ಲಿಂದು ಹೆಸರುಕಾಳು ಖರೀದಿಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿ ಕ್ವಿಂಟಲ್‍ಗೆ 7275 ರೂ.ಗಳಂತೆ ರೈತರಿಂದ ಪ್ರತಿ ಎಕರೆಗೆ ಗರಿಷ್ಟ 4 ಕ್ವಿಂಟಲ್ ಹಾಗೂ ಗರಿಷ್ಟ 6 ಕ್ವಿಂಟಲ್ ಹೆಸರುಕಾಳನ್ನು ಖರೀದಿಸಲಾಗುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಲು ತಿಳಿಸಿದರು.

ಬಾಗಲಕೋಟೆ ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಎಸ್.ಬಿ.ಮಾಚಾ ಮಾತನಾಡಿ ಸರಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಬರುವ ಎಲ್ಲ ಯೋಜನೆಗಳ ಲಾಭ ರೈತರು ಪಡೆದುಕೊಳ್ಳಬೇಕು. ಸಂಸ್ಥೆಯವರು ಖರೀದಿಸಿದ ಹೆಸರುಕಾಳಿನ ಹಣವನ್ನು ಕೂಡಲೇ ರೈತರಿಗೆ ಪಾವತಿಸಲು ಮತ್ತು ರೈತರಿಗೆ ಖರೀದಿ ಕೇಂದ್ರದ ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಕೆ.ಎಸ್.ಸಿ.ಎಂ.ಎಫ್ ಶಾಖಾಧಿಕಾರಿ ಶ್ರೀಧರ ಕುಲಕರ್ಣಿಯವರಿಗೆ ತಿಳಿಸಿದರು.
ಸಹಾಯಕ ಕೃಷಿ ನಿರ್ದೇಶಕ ಪ್ರಭುಸ್ವಾಮೀಜಿ ಸರಗಣಾಚಾರಿ, ಸಹಾಯಕ ಕೃಷಿ ನಿರ್ದೇಶಕರಾದ ಎಸ್.ಎನ್.ಪತ್ತಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಹಾಯಕ ಕೃಷಿ ಅಧಿಕಾರಿ ಗಯಾಲಿ, ಮತ್ತು ಎ.ಪಿ.ಎಮ್.ಸಿ ಸಹಾಯಕ ನಿರ್ದೇಶಕ ಲಕ್ಕುಂಡಿ, ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕರಾದ ವೆಂಕಣ್ಣ ಹಲಗಲಿ, ಶಿದ್ದಪ್ಪ ಹೂಗಾರ, ವೆಂಕಟೇಶ ರಂಗನ್ನವರ, ನೀಲಪ್ಪನವರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಬಸವರಾಜ ಮಸಬಿನಾಳ ನಿರೂಪಿಸಿದರು. ಆಡಳಿತ ಮಂಡಳಿಯ ನಿರ್ದೇಶಕರಾದ ರಂಗನ್ನವರ ವಂದಿಸಿದರು.

Raksha Deshpande

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago