News Karnataka Kannada
Sunday, April 28 2024
ಬಾಗಲಕೋಟೆ

ಮಾಜಿ ಸಂಸದ ಎಚ್​.ಬಿ. ಪಾಟೀಲ ನಿಧನ

H B Patil
Photo Credit : News Kannada

ಬಾಗಲಕೋಟೆ: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದ ಎಚ್​.ಬಿ ಪಾಟೀಲ  ನಿಧನರಾದರು ಅವರನ್ನ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮಂಗಳವಾರ ಕೊನೆಯುಸಿರೆಳೆದರು.

ಇವರಿಗೆ 80 ವರ್ಷ ವಯಸ್ಸಾಗಿತ್ತು. ಇಂದು(ಬುಧವಾರ) ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಬಾದಾಮಿ ತಾಲೂಕಿನ ರಡ್ಡೇರ ತಿಮ್ಮಾಪುರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪಾಟೀಲ ಅವರಿಗೆ ಪತ್ನಿ, ಐವರು ಪುತ್ರಿಯರು, ಪುತ್ರ ಇದ್ದಾರೆ.

1942ರ ಮಾರ್ಚ್​ 29ರಂದು ಜನಿಸಿದ ಎಚ್​.ಬಿ. ಪಾಟೀಲ ಅವರು ಸ್ವಗ್ರಾಮದಲ್ಲಿ ಪ್ರಾಥಮಿಕ, ರಾಮದುರ್ಗದಲ್ಲಿ ಮಾಧ್ಯಮಿಕ ಶಿಕ್ಷಣ ಪಡೆದು, ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿಎ, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಸ್ನಾತಕೋತ್ತರ(ಎಂಎ) ಪದವಿ ಪಡೆದಿದ್ದರು. ಶಿಕ್ಷಣ ನಂತರ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ನಂತರ ಸ್ನೇಹಿತರ ಒತ್ತಾಯಕ್ಕೆ ಮಣಿದು ಬಾದಾಮಿ ತಾಲೂಕು ಬೋರ್ಡ್​ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ರಾಜಕೀಯ ಪ್ರವೇಶಿಸಿದರು.

ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷ, ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. 1984ರ ಡಿಸೆಂಬರ್​ನಲ್ಲಿ ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯಥಿರ್ಯಾಗಿ ಸ್ಪರ್ಧಿಸಿದ್ದ ಗೆಲುವು ಸಾಧಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು