ಬಾಗಲಕೋಟೆ : ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಕೊರೊನಾ ಪ್ರಕರಣಗಳು ಮಂಗಳವಾರ ದೃಡಪಟ್ಟಿಲ್ಲವೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 35161 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 34804 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. 3066 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 846130 ಸ್ಯಾಂಪಲ್ ಪರೀಕ್ಷಿಸಲಾಗಿದ್ದು. ಅದರಲ್ಲಿ 807303 ನೆಗಟಿವ್ ಪ್ರಕರಣ, ಹಾಗೂ 330 ಮೃತ ಪ್ರಕರಣಗಳು ವರದಿಯಾಗಿರುತ್ತದೆ.
ಸಕ್ರಿಯ ಪ್ರಕರಣಗಳು 27 ಇದ್ದು, ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಳೆದ 24 ಗಂಟೆಗಳಲ್ಲಿ ಪರೀಕ್ಷಿಸಲಾದ 2756 ಸ್ಯಾಂಪಲ್ ಪೈಕಿ ಯಾವುದೇ ಪಾಜಿಟಿವ್ ಪ್ರಕರಣ ಕಂಡುಬಂದಿರುವದಿಲ್ಲ. ಪಾಜಿಟಿವಿಟಿ ಪ್ರಮಾಣ ಶೇ 0.00 ಇರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.