News Karnataka Kannada
Thursday, May 02 2024
ಬಾಗಲಕೋಟೆ

ಶಾಲಾ ಕಟ್ಟಡ ಕಾಮಗಾರಿಗೆ ಚರಂತಿಮಠ ಚಾಲನೆ

New Project 2021 09 09t191901.448
Photo Credit :
ಬಾಗಲಕೋಟೆ : ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಆವರಣ ಜಿ.ಎಚ್.ಪಿ.ಎಸ್ ನಂ.16ರಲ್ಲಿ ಒಟ್ಟು 131.31 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ವೀರಣ್ಣ ಚರಂತಿಮಠ ಗುರುವಾರ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಒಟ್ಟು 131.31 ಲಕ್ಷ ರೂ.ಗಳ ಅಂದಾಜು ಮೊತ್ತದಲ್ಲಿ ನೆಲಮಹಡಿ ಒಂದು ಕೊಠಡಿ ಮತ್ತು ಮೊದಲನೆ ಮಹಡಿಯಲ್ಲಿ 5 ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿ ಗುಣಮಟ್ಟದಿಂದ ಕೂಡಿರುವದರ ಜೊತೆಗೆ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಶಾಲಾ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಸಹ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಈರಣ್ಣ ಶಿರಗಣ್ಣವರ, ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಜಾಸ್ಮೀನ್ ಕಿಲ್ಲೇದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಹಿರೇಮಠ, ಶಾಲಾ ಮುಖ್ಯೋಪಾದ್ಯಾಯ ಬಳೂಲಮಟ್ಟಿ, ಶಿಕ್ಷಕರಾದ ಶಿವಾನಂದ ಪದರ ಸೇರಿದಂತೆ ಬಿಟಿಡಿಎ ಅಧಿಕಾರಿಗಳು ಹಾಗೂ ಶಾಲಾ ಎಸ್.ಡಿ.ಎಂಸಿ ಅಧ್ಯಕ್ಷರು ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು