ಬಾಗಲಕೋಟೆ

ಸಮಸ್ಯೆ ಪರಿಹರಿಸಿ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಿಸಬೇಕು : ಸತೀಶ ಬಂಡಿವಡ್ಡರ

ಬಾಗಲಕೋಟೆ: ಮುಧೋಳ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭ ಮಾಡುವ ವಿಷಯದಲ್ಲಿ ಸಚಿವ ಗೋವಿಂದ ಕಾರಜೋಳ ಸೇಡಿನ ರಾಜಕಾರಣ ಮಾಡಬಾರದು. ಸಮಸ್ಯೆ ಪರಿಹರಿಸಿ ಕಾರ್ಖಾನೆ ಆರಂಭಿಸಬೇಕು ಎಂದು ಮುಧೋಳದ ಕಾಂಗ್ರೆಸ್ ಪಕ್ಷದ ಮುಖಂಡ ಸತೀಶ ಬಂಡಿವಡ್ಡರ ಆಗ್ರಹಿಸಿದರು.

ಕಾರ್ಖಾನೆ ಬಂದ್ ಮಾಡಿದ್ದರಿಂದ  ಕಾರ್ಮಿಕರು, ರೈತರು ಬೀದಿಗೆ ಬಿದ್ದಿದ್ದಾರೆ. ಅವರ ಬಗ್ಗೆ ಕಾಳಜಿ ವಹಿಸಬೇಕಿರುವುದು ಕ್ಷೇತ್ರದ ಶಾಸಕ ಗೋವಿಂದ ಕಾರಜೋಳ. 20 ವರ್ಷಗಳ ಹಿಂದೆ ಕಾರ್ಖಾನೆ ಅಧ್ಯಕ್ಷ ಸ್ಥಾನ ರಾಜೀನಾಮೆ ಪಡೆದುಕೊಂಡಿರುವ ವಿಷಯ ಮುಂದಿಟ್ಟುಕೊOಡು ಸೇಡಿನ ರಾಜಕಾರಣ ಮಾಡಲು ಮುಂದಾಗುವುದು ಸರಿಯಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ರನ್ನ ಕಾರ್ಖಾನೆ ಆರಂಭದಿOದಲು ಲಾಸ್‌ನಲ್ಲಿ ಇದೆ. ಗೋವಿಂದ ಕಾರಜೋಳ ಅವರು 30 ತಿಂಗಳುಗಳ ಕಾಲ ಕಾರ್ಖಾನೆ ಅಧ್ಯಕ್ಷರಾಗಿದ್ದ ವೇಳೆ 16 ಕೋಟಿ ಸಾಲ ಇತ್ತು. ನಂತರ ಇದು ದೊಡ್ಡ ಮೊತ್ತ ದತ್ತ ಸಾಗಿತು. ಕಾರ್ಖಾನೆ ಲಾಭದಲ್ಲಿದೆ ಎನ್ನುವ ಘೋಷಣೆ ಈವರೆಗೆ ಮೊಳಗಲಿಲ್ಲ. ಕಾರ್ಖಾನೆಯ ಕೆಟ್ಟ ಸ್ಥಿತಿಗೆ ಬರಲು ಕಾರ್ಖಾನೆ ಅಧ್ಯಕ್ಷ ರಾಮಣ್ಣ ತಳೇವಾಡ ನೇತೃತ್ವದ ಆಡಳಿತ ಮಂಡಳಿ ನೇರ ಕಾರಣ, ಅವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು. ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಪ್ರಸಕ್ತ ವರ್ಷದಿಂದ  ಕಾರ್ಖಾನೆ ಆರಂಭಿಸಿ ರೈತರು, ಕಾರ್ಮಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ರಾಜೀವ ಕಂಠಿ, ಬಸವರಾಜ ಇಟ್ಟನವನರ, ಲೋಕಣ್ಣ ನಾವಿ, ಕಿರಣ ನ್ಯಾಮಗೌಡ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

Raksha Deshpande

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

3 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

5 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

5 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

5 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

5 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

6 hours ago