ಬಾಗಲಕೋಟೆ

ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹ

ಬಾಗಲಕೋಟೆ : ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಗಜಾನನ ಉತ್ಸವ ಸಮಿತಿಗಳ ಮಹಾಮಂಡಳದ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಮಹಾಮಂಡಳದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಭಾರತದಲ್ಲಿ ಗಣೇಶ ಉತ್ಸವಕ್ಕೆ ಭವ್ಯ ಪರಂಪರೆ, ಇತಿಹಾಸವಿದೆ. ಪ್ರತಿ ಗಲ್ಲಿಗಳಲ್ಲಿ ನೂರಾರು ವರ್ಷಗಳಿಂದ ಗಣೇಶ ಚತುರ್ಥಿ ದಿನ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಮಾಡಲಾಗುತ್ತದೆ. ಹಿಂದು ಧರ್ಮದ ಅವಿಭಾಜ್ಯ ಅಂಗವಾಗಿದೆ. ಸಾಮಾಜಿಕ, ಧರ್ಮ, ದೇಶ ಭಕ್ತಿ ಜಾಗೃತಿ ಮೂಡಿಸುವುದು ಈ ಆಚರಣೆ ಹಿಂದಿರುವ ಉದ್ದೇಶ.ಸರ್ಕಾರ ಕೋವಿಡ್ ನೆಪದಲ್ಲಿ ಹಬ್ಬ ಆಚರಣೆಗೆ ಬ್ರೇಕ್ ಹಾಕುವುದು ತರವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ನಿಯಮವಾಳಿಗಳನ್ನು ಪಾಲನೆ ಮಾಡಿ ಸರಳವಾಗಿ ಗಣೇಶ ಉತ್ಸವ ಆಚರಣೆ ಮಾಡಲಾಗಿದೆ. ಈ ವರ್ಷವು ಆಚರಣಾ ಸಮಿತಿಗಳು ಎಲ್ಲ ಸಿದ್ಧತೆ ಕೈಗೊಂಡಿವೆ. ಮೂರ್ತಿ ತಯಾರಕರು 4-5 ತಿಂಗಳ ಹಿಂದೆ ಸಿದ್ಧತೆ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ನಿರ್ಬಂಧ ವಿಧಿಸಬಾರದು. ಸಾರ್ವಜನಿಕರ ಗಣೇಶ ಪ್ರತಿಷ್ಠಾಪನೆಗೆ ಮಂಡಳಿ, ಸಮಿತಿಗಳಿಗೆ ಪರವಾನಿಗೆ ನೀಡಬೇಕು. ವಿಸರ್ಜನೆಗೆ ಒತ್ತಡ ಹಾಕಬಾರದು. ಶಾಮಿಯಾನ ಹಾಕಲು ಅನುಮತಿ ನೀಡಬೇಕು. ಏಕಗವಾಕ್ಷಿ ಯೋಜನೆ ಅಡಿಯಲ್ಲಿ ಒಂದೇ ಸೂರಿನಡಿ ಪರವಾನಿಗೆ ಪತ್ರ ನೀಡಲು ನಿಯಮ ರೂಪಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಶಿವು ಮೇಲ್ದಾಡ, ವಿಜಯ ಸುಲಾಖೆ, ಅಶೋಕ ಮುತ್ತಿನಮಠ, ಶಿವು ಮೇಲ್ನಾಡ, ಮನೋಜ ಕಡಿವಾಲ, ಆನಂದ ಬಾಂಡಗೆ, ಕುಮಾರಸ್ವಾಮಿ ಹಿರೇಮಠ. ತುಕಾರಾಮ ಹುಲ್ಲೂರ, ಸಂತೋಷ ಕಪಾಟೆ, ಕೃಷ್ಣ ರಾಜೂರ, ಅಶೋಕ ಮಹಿಂದ್ರಕರ, ದಶರಥ ಲೋನಾರಿ, ಮಲ್ಲು ಸಜ್ಜನ ಇತರರು ಇದ್ದರು.
Raksha Deshpande

Recent Posts

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

5 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

41 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

59 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago