ಬಾಗಲಕೋಟೆ

3.10 ಕೋಟಿ ವೆಚ್ಚದಲ್ಲಿ ನವೀಕೃತ ಸಂತೆ ಮೈದಾನ ನಿರ್ಮಾಣ : ಚರಂತಿಮಠ

ಬಾಗಲಕೋಟೆ : ನವನಗರದ ವಾಣಿಜ್ಯ ಸೆಕ್ಟರ ನಂ.4ರಲ್ಲಿ ಸಂತೆ ಮೈದಾನವನ್ನು 3.10 ಕೋಟಿ ರೂ.ಗಳ ವೆಚ್ಚದಲ್ಲಿ ವಾಹನಗಳ ಪಾರ್ಕಿಂಗ್, ಸಾರ್ವಜನಿಕ ಶೌಚಾಲಯ ಮತ್ತು ಬೆಳಕಿನ ವ್ಯವಸ್ಥೆಯೊಂದಿಗೆ ಸುಸಜ್ಜಿತವಾಗಿ ನವೀಕರಿಸಲಾಗಿದೆ ಎಂದು ಶಾಸಕ ವೀರಣ್ಣ ಚರಂತಿಮಠ ತಿಳಿಸಿದರು.
ನವನಗರದ ಸೆಕ್ಟರ ನಂ.4ರಲ್ಲಿ ರವಿವಾರ ಹಮ್ಮಿಕೊಂಡ ಸಂತೆ ಮೈದಾನ ಪುನರಾರಂಭಕ್ಕೆ ಚಾಲನೆ ಅವರು  ಮಾತನಾಡಿದರು. ನವೀಕೃತಗೊಂಡ ಸಂತೆ ಮೈದಾನದಲ್ಲಿ ವ್ಯಾಪಾರಸ್ಥರು ನಿಗಧಿತ ಸ್ಥಳಗಳಲ್ಲಿ ಅಂಗಡಿ ಹಾಕಿಕೊಂಡು ಗ್ರಾಹಕರಿಗೆ ನಿಗದಿಪಡಿಸಿದ ಕೆಂಪು ಬಣ್ಣದ ಹಾದಿಯಲ್ಲಿ ನಡೆಯಲು ಅನುಕೂಲ ಮಾಡಿಕೊಡಬೇಕು. ವ್ಯಾಪಾರ ಪೂರ್ಣಗೊಂಡ ನಂತರ ತಮ್ಮ ಸ್ಥಳದಲ್ಲಿದ್ದ ಎಲ್ಲ ತ್ಯಾಜ್ಯವನ್ನು ನಿಗದಿಪಡಿಸಿದ ಸ್ಥಳದಲ್ಲಿ ಹಾಕಲು ತಿಳಿಸಿದರು.
ಈ ಮೊದಲು ವಾರಕೊಂದು ಬಾರಿ ಸಂತೆ ಜರುಗುತ್ತಿದ್ದು ಇನ್ನು ಮುಂದೆ ಪ್ರತಿದಿನವು ಮಾರುಕಟ್ಟೆ ಕಾರ್ಯನಿರ್ವಹಿಸುತ್ತಿದ್ದು ಗ್ರಾಹಕರು ಇದರ ಉಪಯೋಗ ಪಡೆದುಕೊಳ್ಳಬೇಕು. ವ್ಯಾಪಾರಿಗಳಿಗೆ ಮಳೆಗಾಲದಲ್ಲಿ ತೊಂದರೆಯಾಗದಂತೆ ಮೇಲ್ಚಾವಣಿ ವ್ಯವಸ್ತೆ ಇದ್ದು ಮುಂಬರುವ ದಿನಗಳಲ್ಲಿ ಎಲ್ಲ ವ್ಯಾಪಾರಿಗಳಿಗೂ ಅನುಕೂಲವಾಗುವ ವ್ಯಾಪಾರಿ ಕಟ್ಟೆ ನಿರ್ಮಿಸುವುದರ ಜೊತೆಗೆ ರಸ್ತೆಯನ್ನು ನಿರ್ಮಿಸಲಾಗುವುದು ಎಂದರು.
ವ್ಯಾಪರಸ್ಥರು ತಮಗೆ ನೆರಳು ಬೇಕಾದಲ್ಲಿ ಕೊಟೆಗಳನ್ನು ಹಾಕಿಕೊಳ್ಳಲು ಸ್ಥಳದಲ್ಲಿ ವ್ಯವಸ್ಥೆ ಮಾಡಲಾಗಿದೆ. ಅದನ್ನು ಬಿಟ್ಟು ಮೈದಾನ ಹಾಳುಮಾಡುವ ಕಾರ್ಯಕ್ಕೆ ಕೈ ಹಾಕಬಾರದು ಎಂದು ಎಚ್ಚರಿಕೆ ನೀಡಿದರು. ವ್ಯಾಪಾರಿಗಳು ನಿಗದಿತ ಸ್ಥಳ ಹೊರತು ಪಡಿಸಿ ಅಕ್ರಮಿಸಿದರೆ ನಿದ್ರಾಕ್ಷಿಣ್ಯವಾಗಿ ತೆಗೆದು ಹಾಕಲಾಗುವುದು. ಪ್ರಾಧಿಕಾರದಿಂದ ನಿಗದಿ ಪಡಿಸಿದ ಸ್ಥಳದಲ್ಲಿಯೇ ಸಾರ್ವಜನಿಕರು ವಾಹನಗಳನ್ನು ನಿಲ್ಲಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಮೋಹನ ನಾಡಗೌಡ, ಕುಮಾರ ಯಳ್ಳಿಗುತ್ತಿ, ಶಿವಾನಂದ ಟವಳಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ನಗರಸಭೆ ಉಪಾಧ್ಯಕ್ಷ ಬಸವರಾಜ ಅವರಾಧಿ, ಮುಖ್ಯ ಅಭಿಯಂತರ ಮನ್ಮತಯ್ಯ ಸ್ವಾಮಿ ಹಾಗೂ ಉಪವಿಭಾಗ ಒಂದರ ವಿ.ಜಿ.ಮಿಕ್ಕಲ, ಕಿರಿಯ ಅಭಿಯಂತರರಾದ ರಾಜು ಅವರಾಧಿ, ವಿಜಯಶಂಕರ ಹೆಬ್ಬಳ್ಳಿ, ಎಸ್.ಎಸ್.ಚಿನ್ನಣ್ಣವರ, ಸುರೇಶ ತೆಗ್ಗಿ, ಅಧೀಕ್ಷಕ ಇಂಜಿನೀಯರ್ ಎಂ.ಎಚ್.ಕಟ್ಟಿಮನಿ ಮತ್ತಿತರು ಉಪಸ್ಥಿತರಿದ್ದರು.
Raksha Deshpande

Recent Posts

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

2 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

17 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

39 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

41 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

58 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 hour ago