ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಬೈಕ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.
ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀನಕ್ತ ಮಾದರ (39), ಶಾಂತವ್ವ ಕಟ್ಟಿಮನಿ (43) ಮತ್ತು ಮಾಂತವ್ವ ಮರಡಿ (75) ಮೃತರು.
ಶ್ರೀಕಾಂತ್ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಮಹಿಳೆಯರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಟ್ರಕ್ ಬೈಕ್ಗೆ ಡಿಕ್ಕಿಯಾಗುವ ಮೊದಲು ಅಮೀನಗಡ ಪಟ್ಟಣದ ಬಳಿ ಕಾರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿತ್ತು. ನಂತರ ಮೂರು ಕಿಲೋಮೀಟರ್ ದೂರದಲ್ಲಿ ಮತ್ತೊಮ್ಮೆ ಟ್ರಕ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಅಮೀನಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.
ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…
ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.