ಬಾಗಲಕೋಟೆ : ಟ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದ ಬಳಿ ನಡೆದಿದೆ.
ನಸುಕಿನ ಜಾವದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಕ್ಟರ್ ಗೆ ಹಿಂದಿನಿಂದ ಬಂದ ಕಾರೊಂದು ವೇಗವಾಗಿ ಬಂದು ಗುದ್ದಿದ ಪರಿಣಾಮವಾಗಿ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬೀಳಗಿ ಪೊಲೀಸ್ ಠಾಣಗತ್ತಿಯಲ್ಲಿ ನಡೆದ ಪ್ರಕರಣವಾಗಿದೆ.ಮೃತರ ಕುರಿತಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನ ನಡೆಸುತ್ತಿದ್ದು, ಘಟನೆ ಕುರಿತಂತೆ ಬೀಳಗಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ