News Karnataka Kannada
Monday, May 20 2024
ಬಾಗಲಕೋಟೆ

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು, ಈ ವೇಳೆ ಹಿಂದೂ ಕಾರ್ಯಕರ್ತರು, ಯುವತಿ ಕುಟುಂಬಸ್ಥರು ಆಗಮಿಸಿದ್ದರು.
Photo Credit : NewsKarnataka

ಬಾಗಲಕೋಟೆ: ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು, ಈ ವೇಳೆ ಹಿಂದೂ ಕಾರ್ಯಕರ್ತರು, ಯುವತಿ ಕುಟುಂಬಸ್ಥರು ಆಗಮಿಸಿದ್ದರು. ಇದೇ ವೇಳೆ ಬಾಗಲಕೋಟೆ ನಗರದಲ್ಲಿ ನವನಗರ ಠಾಣೆ ಸಿಪಿಐ ರಾಮಣ್ಣ ಬಿರಾದಾರ ವಿರುದ್ಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಮುಸ್ಲಿಂ‌ ಸಮುದಾಯದ ಪರ ಪೊಲೀಸರು ಇದ್ದಾರೆ ಎಂದು ಆರೋಪಿಸಿ ನವನಗರ ಠಾಣೆ ಸಿಪಿಐ ರಾಮಣ್ಣ ಬಿರಾದಾರ ವಿರುದ್ಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು, ಹಿಂದೂ ಸಂಘಟನೆಗಳ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

ಹಿಂದೂ ಸಂಘಟನೆ ಪ್ರತಿಭಟನೆ ವೇಳೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನಲೆ ಹಿಂದೂ ಪರ ಸಂಘಟನೆಗಳ ಮನೋಜ್, ಕುಮಾರಸ್ವಾಮಿ ಮತ್ತು ವಿಕ್ರಮ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಹಾಗೂ ಪೊಲೀಸ್​​ ವರಿಷ್ಠಾಧಿಕಾರಿ ಅಮರನಾಥ್​ ರೆಡ್ಡಿ ಭೇಟಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು