News Karnataka Kannada
Monday, April 29 2024
ಬಾಗಲಕೋಟೆ

ತಾಯಿ ಕಳೆದುಕೊಂಡ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿ

ಬಾಗಲಕೋಟೆ
Photo Credit : News Kannada

ಬಾಗಲಕೋಟೆ: ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಇತ್ತೀಚೆಗಷ್ಟೇ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು, ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿರಾಣಿ ಅವರಿಗೆ ಸಾಂತ್ವನ ಹೇಳಿದ್ದಾರೆ.

ಮೋದಿ ಸಾಂತ್ವನ ಪತ್ರ ಬರೆದಿದ್ದು, ಸುಶಿಲಾತಾಯಿ ಅವರು ವಿಧಿವಶರಾದ ಸುದ್ದಿ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಕುಟುಂಬಕ್ಕೆ ಅಗಲಿಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ. ತಾಯಿ ಹೃದಯಕ್ಕೆ ಈ ಜಗತ್ತಿನಲ್ಲಿ ಯಾವುದನ್ನು ಹೋಲಿಸೋದಕ್ಕೆ ಸಾಧ್ಯವಿಲ್ಲ. ತಾಯಿ ಎಂದು ಮರಳಿ ಸಿಗದ ಕೊಡುಗೆ ಇದ್ದ ಹಾಗೆ. ತಾಯಿ ಸದಾ ನೆರಳು ನೀಡುವ ಮರದಂತೆ. ಅವರು ಕುಟುಂಬದ ಜೊತೆ ತಮ್ಮ ನೆನಪನ್ನು ಬಿಟ್ಟು ಹೋಗಿದ್ದಾರೆ. ಅವರು ಅಜರಾಮರ ಎಂದು ಉಲ್ಲೇಖಿಸಿದ್ದಾರೆ.

ಈ ಸಾಂತ್ವದ ಪತ್ರವನ್ನು ಮುರುಗೇಶ್ ನಿರಾಣಿ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡು, ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು