News Karnataka Kannada
Sunday, May 19 2024
ಬಾಗಲಕೋಟೆ

ಮಾಜಿ‌ ಸಚಿವ ಎಸ್​ಆರ್​​ ಪಾಟೀಲ್​ಗೆ ಪರಿಷತ್ ಅತ್ಯುತ್ತಮ ಶಾಸಕ ಪ್ರಶಸ್ತಿ

sr-patil
Photo Credit : News Kannada

ಬಾಗಲಕೋಟ: ಸಜ್ಜನ ಹಿರಿಯ ರಾಜಕಾರಣಿ ಮಾಜಿ‌ ಸಚಿವ ಎಸ್​.ಆರ್​​.ಪಾಟೀಲ್ ಅವರಿಗೆ 2021ನೇ ಸಾಲಿನ ಅತ್ಯುತ್ತಮ ‌ಪರಿಷತ್ ಶಾಸಕ ಪ್ರಶಸ್ತಿ ಘೋಷಣೆಯಾಗಿದೆ. ಜು. 18ರಂದು ಸಂಜೆ 6 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಲಿದೆ. ಪ್ರಶಸ್ತಿ ಸ್ವೀಕರಿಸಲು ಆಹ್ವಾನ ‌ನೀಡಿ ಎಸ್​.ಆರ್​. ಪಾಟೀಲ್​ ಅವರಿಗೆ ವಿಧಾನಪರಿಷತ್ ಕಾರ್ಯದರ್ಶಿ ಮೀನಾ ನಾಯಕ್​ ಅವರು ಪತ್ರ ಬರೆದಿದ್ದಾರೆ.

ಎಸ್​.ಆರ್​​.ಪಾಟೀಲ್ ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್​ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದಾರೆ. 24 ವರ್ಷ ಮೇಲ್ಮನೆ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಭಾ ನಾಯಕರಾಗಿ ಹಾಗೂ ಮೂರು ವರ್ಷ ಸಚಿವರಾಗಿದ ಕಾರ್ಯ ನಿರ್ವಹಿಸಿದ್ದಾರೆ.

ಇವರು ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್​ ಸಿಗಲಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು