ಬಾಗಲಕೋಟೆ: ಜಿಲ್ಲೆಯ ರಬಕವಿ ಬಸ್ ನಿಲ್ದಾಣದಲ್ಲಿ ಪುಂಡರ ಗುಂಪು ವಿದ್ಯಾರ್ಥಿನಿಯನ್ನು ಚುಡಾಯಿಸಿ ಹಲ್ಲೆ ಮಾಡಿದ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬೆಳಗ್ಗೆ ಸ್ನೇಹಿತೆಯರೊಂದಿಗೆ ವಿದ್ಯಾರ್ಥಿನಿ ಕಾಲೇಜಿಗೆ ತೆರಳುತ್ತಿದ್ದಳು. ಈ ವೇಳೆ ರಬಕವಿ ಬಸ್ ನಿಲ್ದಾಣಕ್ಕೆ ಬಂದ ಮೂವರು, ವಿದ್ಯಾರ್ಥಿನಿಯರ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ನಂತರ ಮೊಬೈಲ್ ನಂಬರ್ ನೀಡುವಂತೆ ಕೇಳಿಕೊಂಡಿದ್ದಾರೆ. ಆಗ ನಂಬರ್ ಕೊಡಲು ನಿರಾಕರಿಸಿದ್ದಕ್ಕೆ ಹಲ್ಲೆ ಮಾಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಅನ್ವರ್ ಮಕಾಂದಾರ್, ಆಯನ್ ಪಟೇಲ್, ಜಾವೀದ್ ಅಲಿಹ್ಮದ್ನನ್ನ ಪೊಲೀಸರು ಬಂಧಿಸಿದ್ದಾರೆ.
ಹಲ್ಲೆಗೊಳಗಾದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೇರದಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.