ವಿದ್ಯಾರ್ಥಿನಿ ಮೇಲೆ ಸಂಶಯ ಪಟ್ಟ ಶಿಕ್ಷಕಿಯರು : ನೊಂದ ಬಾಲಕಿ ಆತ್ಮಹತ್ಯೆ

ಬಾಗಲಕೋಟೆ: ಹಣ ಕಳ್ಳತನವಾಗಿದೆ ಎಂದು ಶಿಕ್ಷಕಿಯರು ಬಟ್ಟೆ ಬಿಚ್ಚಿಸಿ ಪರಿಶೀಲನೆ ನೆಡಸಿದ್ದಾರೆ ಇದರಿಂದ ಮನನೊಂದ 8ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಈ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ದಿವ್ಯಾ ಬಾರಕೇರ(14) ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಗ್ರಾಮದ ಕದಂಪುರ ಪ್ರೌಢಶಾಲೆಯ ಶಿಕ್ಷಕಿ ಜಯಶ್ರೀ ಮಿಶ್ರಿಕೋಟಿ ಇವರ 2 ಸಾವಿರ ಹಣ ಕಳೆದು ಹೋಗಿದೆ ಎಂದು ಕೆಲವು ವಿದ್ಯಾರ್ಥಿನಿಯರ ಮೇಲೆ ಸಂಶಯ ಪಟ್ಟು ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ನೆಡಸಿದ್ದಾರೆ. ದೇವರ ಮೇಲೆ ಆಣೆ ಕೂಡ ಮಾಡಿಸಿದ್ದಾರೆ.ಈ ವೇಳೆ ಮನನೊಂದ ವಿದ್ಯಾರ್ಥಿನಿ ಮಾರ್ಚ್ 16 ರಂದು ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಬಂದು ನೇಣಿಗೆ ಶರಣಾಗಿದ್ದಾಳೆ.ಆದರೆ ಹಣ ಮಾರನೇ ದಿನ ಶಾಲೆಯ ಲ್ಯಾಬ್ ನಲ್ಲಿತ್ತು ಎಂದು ತಿಳಿದು ಬಂದಿದೆ. ವಿನಾಕಾರಣ ಸಂಶಯಪಟ್ಟು ಒಂದು ಜೀವ ಹೋಗಲು ಶಿಕ್ಷಕಿ ಕಾರಣರಾಗಿದ್ದಾರೆ.

ಇತ್ತ ಪೋಷಕರು ಶಿಕ್ಷಕಿ ವಿರುದ್ಧ ಬಾಗಲಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಕೆಯ ಚಿಕ್ಕಪ್ಪ ಶಿಕ್ಷಕಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಇನ್ನೊಂದೆಡೆ ಪೋಷಕರು ಘಟನೆ ತಕ್ಷಣ ತಿಳಿಸದಕ್ಕೆ ಪೋಷಕರ ವಿರುದ್ದ ದೂರು ದಾಖಲಿಸಲು ಮುಂದಾಗಿದ್ದಾರೆ.

 

Nisarga K

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago