ಬಾಗಲಕೋಟೆ: ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿಯ ಕಾರು ಅಪಘಾತಕ್ಕೊಳಗಾಗಿದೆ. ಅಪಘಾತದಲ್ಲಿ ಶಿವಕುಮಾರ ಸ್ವಾಮೀಜಿಗೆ ಗಾಯಗಳಾಗಿದ್ದು, ಆ್ಯಂಬುಲೆನ್ಸ್ ಮೂಲಕ ಸ್ವಾಮೀಜಿಯನ್ನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ನಿನ್ನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಗ್ರಾಮದಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಹಾಗೂ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಅಪಘಾತ ಆಗಿದೆ. ಆ್ಯಂಬುಲೆನ್ಸ್ ಮೂಲಕ ಶಿವಕುಮಾರ ಸ್ವಾಮೀಜಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ನಡೆದಿದೆ