News Karnataka Kannada
Sunday, April 21 2024
Cricket
ಬೆಳಗಾವಿ

ಈಶ್ವರಪ್ಪ ಬಂಧಿಸುವಂತೆ ಆಗ್ರಹಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ; ಡಿ.ಕೆ. ಶಿವಕುಮಾರ್

5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುತ್ತೇವೆ, ರದ್ದು ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
Photo Credit :

ಬೆಳಗಾವಿ : ‘ಕಮಿಷನ್ ಕಿರುಕುಳ ನೀಡಿ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಏ.14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಇಲ್ಲಿನ ಹೋಟೆಲ್‌ನಲ್ಲಿ ಬುಧವಾರ ರಾತ್ರಿ ನಡೆದ ಸಭೆಯ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಈಶ್ವರಪ್ಪ ರಾಜೀನಾಮೆ ಪಡೆಯುವುದು ಮುಖ್ಯವಲ್ಲ, ಅವರನ್ನು ಬಂಧಿಸಬೇಕು ಎನ್ನುವುದು ನಮ್ಮ ಪ್ರಮುಖ ಆಗ್ರಹವಾಗಿದೆ’ ಎಂದರು.

‘ಏ. 15ರಿಂದ 20ರವರೆಗೆ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಜಿಲ್ಲೆಗಳ ಪ್ರವಾಸ ಮಾಡಲಿದ್ದೇವೆ. ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸುತ್ತೇವೆ’ ಎಂದು ಹೇಳಿದರು.

‘ಸಂತೋಷ್ ಕುಟುಂಬದವರನ್ನು ಹತ್ತಿಕ್ಕಲು ಪ್ರಯತ್ನ ನಡೆದಿದೆ ಎಂದು ಕೆಲವು ಮಾಹಿತಿ ಬಂದಿದೆ. ಸಾಕ್ಷ್ಯ ಇಲ್ಲದೆ ಮಾತನಾಡುವುದು ಸರಿಯಲ್ಲ. ಸಚಿವರ ವಿರುದ್ಧ ಮೃತನ ತಾಯಿ, ಪತ್ನಿಯೆ ನೇರವಾಗಿಯೇ ಆರೋಪಿಸಿದ್ದಾರೆ. ಅದನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ’ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು