News Karnataka Kannada
Thursday, April 25 2024
Cricket
ಬೆಳಗಾವಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಹೊಸ ಟ್ವಿಸ್ಟ್

Santhosh Patil
Photo Credit :

ಬೆಳಗಾವಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಬೆಳಗಾವಿಯಲ್ಲಿ ನಿಕಟಪೂರ್ವ ಜಿ.ಪಂ.ಅಧ್ಯಕ್ಷೆ ಆಶಾ ಐಹೊಳೆ ಒಂದಷ್ಟು ಸತ್ಯಾಂಶದ ಮೇಲೆ ಬೆಳಕು ಚೆಲ್ಲಿದ್ದಾರೆ.

2020ರಲ್ಲಿ ಹಿಂಡಲಗಾ ಗ್ರಾಮದ ಲಕ್ಷ್ಮಿದೇವಿ ಜಾತ್ರೆ ಇತ್ತು. ಜಾತ್ರೆಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರು ನನ್ನ ಬಳಿ ಬಂದಿದ್ದರು. ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಲೇಟರ್ ನೀಡುವಂತೆ ಕೋರಿದ್ದರು. ಅವರ ಮನವಿಯಂತೆ ನಾನು ಲೆಟರ್ ಕೊಟ್ಟಿದ್ದೇನೆ. ಆದರೆ, ನಾನು ಕೊಟ್ಟ ಲೆಟರ್ ಮುಂದೇನಾಯ್ತು ಅನ್ನೋದು ನನಗೆ ಗೊತ್ತಿಲ್ಲ ಅಂತರೆ ಆಶಾ ಐಹೊಳೆ ಹೇಳಿದ್ದಾರೆ.

ಈ ಸಂಬಂಧ RDPR ಇಲಾಖೆ ಅನುಮೋದನೆ ನೀಡಿರುವ ವಿಷಯ ನನಗೆ ಇವತ್ತಷ್ಟೇ ಗೊತ್ತಾಗಿದೆ. RDPR ಇಲಾಖೆಯಿಂದ ಬಂದಿರುವ ರಿಸೀವ್ ಕಾಪಿನೂ ನನಗೆ ಸಿಕ್ಕಿಲ್ಲ. ಆದರೆ ಗುತ್ತಿಗೆದಾರ ಸಂತೋಷ ಪಾಟೀಲ್‌ಗೆ ನಾನು ಮುಖಾಮುಖಿ ಎಂದೂ ಭೇಟಿಯಾಗಿಲ್ಲ. ಅವರ ಆತ್ಮಹತ್ಯೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಆದರೆ ಸಂತೋಷ ಆತ್ಮಹತ್ಯೆಯ ದುರಂತ ಮಾಡಿಕೊಳ್ಳಬಾರದಿತ್ತು ಅಂತರೆ ಆಶಾ ಐಹೊಳೆ ವಿಷಾದ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು