News Karnataka Kannada
Saturday, April 13 2024
Cricket
ಬೆಳಗಾವಿ

ಮೃತ ಸಂತೋಷ್‌ ಪಾಟೀಲ್‌ ಮನೆಗೆ ಸಚಿವ ಮುರುಗೇಶ ನಿರಾಣಿ ಭೇಟಿ

Global Investors' Meet attracts Rs 8L cr investment on Day 1
Photo Credit :

ಬೆಳಗಾವಿ : ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿಯಲ್ಲಿರುವ ಮೃತನ ಮನೆಗೆ ಸಚಿವ ಮುರುಗೇಶ ನಿರಾಣಿ ಭೇಟಿ ನೀಡಿ ಸಾಂತ್ವನ ಹೇಳಿದರು.

ಸಮರ್ಥ ಕಾಲೋನಿಯ ನಿವಾಸಿ ಸಂತೋಷ್‌ ಪಾಟೀಲ್‌ ಮನೆಗೆ ಭೇಟಿ ನೀಡಿದ ಸಚಿವರು, ಸಂತೋಷ ಕುಟುಂಬಸ್ಥರಿಗೆ ಮತ್ತು ಪತ್ನಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ನಿಮ್ಮ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ. ಸರ್ಕಾರದಿಂದ ಆದಷ್ಟು ಸಹಾಯವನ್ನು ಕುಟುಂಬಕ್ಕೆ ಮಾಡುತ್ತೇವೆ. ಸಂತೋಷ್ ಪತ್ನಿಗೆ ಯಾವುದಾದರೂ ಒಂದು ಸರ್ಕಾರಿ ನೌಕರಿಯನ್ನು ಕೊಡಿಸುವಂತೆ ಸಿಎಂ ಬೊಮ್ಮಾಯಿಯವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಎನ್ನಲಾದ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಮಂಗಳವಾರ ನಿಗೂಢವಾಗಿ ಸಾವನ್ನಪ್ಪಿದ್ದರು.

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ” ಎಂದು ಬರೆದಿರುವ “ಡೆತ್‌ ನೋಟ್‌’ ಒಂದು ವೈರಲ್‌ ಆಗುವುದರೊಂದಿಗೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಸಂತೋಷ್‌ ಅವರು ಸಚಿವ ಈಶ್ವರಪ್ಪ ವಿರುದ್ಧ ಶೇ. 40 ಕಮಿಷನ್‌ ಆರೋಪ ಮಾಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು