News Karnataka Kannada
Saturday, April 13 2024
Cricket
ಬೆಳಗಾವಿ

ಮೋದಿಯವರ ಯೋಜನೆಯನ್ನು ದೇಶದ ಜನತೆ ಮೆಚ್ಚಿಕೊಂಡಿದ್ದಾರೆ: ಅರುಣ್ ಸಿಂಗ್

Arun Singh
Photo Credit :

ಬೆಳಗಾವಿ:‌ ಪ್ರಧಾನಿ ನರೇಂದ್ರ ‌ಮೋದಿಯವರ ಯೋಜನೆಯನ್ನು ದೇಶದ ಜನತೆ ಮೆಚ್ಚಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಬಡವರು, ಸಾಮಾನ್ಯ‌ ವರ್ಗ ಹಾಗೂ‌ ರೈತರ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದರು.

ಉತ್ತರ ಕರ್ನಾಟಕದ ಮಹದಾಯಿ ನದಿ ನೀರಿನ ಸಮಸ್ಯೆಯನ್ನು ಶೀಘ್ರದಲ್ಲೇ ಇತ್ಯರ್ಥ ಪಡಿಸಲಾಗುವುದು. ಇದು ಬಹು ದೊಡ್ಡ ವಿಷಯವಾಗಿದ್ದ, ಆದಷ್ಟು ಬೇಗ ಈ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಕಾಂಗ್ರೆಸ್ ಪಂಚರಾಜ್ಯ ಚುನಾವಣೆಯಲ್ಲಿ ಹೇಳ ಹೆಸರಿಲ್ಲದಂತೆ ಅಳಿಸಿ ಹೋಗಿದೆ. ಕಾಂಗ್ರೆಸ್‌ಗೆ ಈಗ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ ಎಂದು ಟೀಕೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು