Categories: ಬೆಳಗಾವಿ

ಆರ್ ಎನ್. ನಾಯ್ಕ್ ಹತ್ಯೆ ಪ್ರಕರಣ; ಬನ್ನಂಜೆ ರಾಜಾ ಸೇರಿ 8 ಮಂದಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ : ಅಂಕೋಲಾದ ಉದ್ಯಮಿ, ಬಿಜೆಪಿ ಮುಖಂಡ ಆರ್ ಎನ್. ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಮಬಂಧಿಸಿ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ನ್ಯಾಯಾಲಯ ಆಪಾದಿತರಿಗೆ ಶಿಕ್ಷೆಯ ಪ್ರಮಾಣ ಘೋಷಿಸಿದ್ದು, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿದಂತೆ 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ಮಹತ್ವದ ತೀರ್ಪು ನೀಡಿದೆ.

ಭೂಗತ ಪಾತಕಿ ಬನ್ನಂಜೆ ರಾಜಾ ಸಹಿತ 9 ಆರೋಪಿಗಳನ್ನು ದೋಷಿಗಳು ಎಂದು ನ್ಯಾಯಾಧೀಶ ಸಿ.ಎಂ. ಜೋಶಿ ಘೋಷಿಸಿದ್ದರು.ಓರ್ವ ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.

ಉಡುಪಿ ಮೂಲದ ಬನ್ನಂಜೆ ರಾಜಾ, ಉತ್ತರ ಪ್ರದೇಶದ ಜಗದೀಶ್‌ ಪಟೇಲ್‌, ವಿಜಯಪುರದ ಅಂಬಾಜಿ ಬಂಡುಗೋರ, ಕಾರ್ಕಳದ ಮಂಜುನಾಥ ನಾರಾಯಣ ಭಟ್‌, ಕೇರಳದ ಕೆ.ಎಂ. ಇಸ್ಮಾಯಿಲ್‌, ಅಚ್ಚಂಗಿ ಮಹೇಶ, ಸುಳ್ಯ ಸಂತೋಷ, ಜಗದೀಶಚಂದ್ರ ರಾಜ್‌ ಅರಸ್‌, ಅಂಕಿತಕುಮಾರ ಕಷ್ಯಪ್‌ ದೋಷಿಗಳಾಗಿದ್ದರು.

ರಬ್ದಿನ್‌ ಸಲೀಂ, ಮಹ್ಮದರ್ಷದ ಶಾಬಂದರಿ ಹಾಗೂ ಆನಂದ ನಾಯಕ ಎಂಬವರು ದೋಷಮುಕ್ತರಾಗಿದ್ದರು. ಭಟ್ಕಳದ ನಾಜೀಮ್‌ ನಿಲಾವರ್‌, ಮಂಗಳೂರಿನ ಹಾಜಿ ಆಮಿನ್‌ ಬಾಷಾ ಹಾಗೂ ಸಕಲೇಶಪುರದ ಸುಲೇಮಾನ್‌ ಜೈನುದ್ದೀನ್‌ ತಲೆಮರೆಸಿಕೊಂಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಕೆ.ಜಿ. ಪುರಾಣಿಕಮಠ ಹಾಗೂ ಹೆಚ್ಚುವರಿ ವಿಶೇಷ ಅಭಿಯೋಜಕ ಶಿವಪ್ರಸಾದ ಆಳ್ವ ವಾದಿಸಿದ್ದರು.

ಅಂಕೋಲಾದ ಉದ್ಯಮಿ ಆರ್‌.ಎನ್‌. ನಾಯ್ಕ ಅವರಿಗೆ 3 ಕೋಟಿ ರೂ. ಹಫ್ತಾ ನೀಡುವಂತೆ ಬನ್ನಂಜೆ ರಾಜಾ ಬೇಡಿಕೆ ಇಟ್ಟಿದ್ದ. 2012ರಲ್ಲಿ ವಿದೇಶದಿಂದಲೇ ಎರಡು ಸಲ ಇಂಟರ್‌ನೆಟ್‌ ಕರೆ ಮಾಡಿ ಬೆದರಿಕೆ ಹಾಕಿದ್ದ. ಹಣ ನೀಡಲು ನಿರಾಕರಿಸಿದ್ದಕ್ಕೆ ಉದ್ಯಮಿಯನ್ನು ಹತ್ಯೆಗೈಯಲು ಪ್ಲ್ಯಾನ್ ಮಾಡಿದ್ದ. ಆರ್‌.ಎನ್‌. ನಾಯ್ಕ ಅವರು ಚೇರ್ಮನ್‌ ಆಗಿದ್ದ ದ್ವಾರಕಾ ಕೋ ಆಪರೇಟಿವ್‌ ಸೊಸೈಟಿಯಿಂದ 2013ರ ಡಿ. 21ರಂದು ಮಧ್ಯಾಹ್ನ 1:30ರ ಸುಮಾರಿಗೆ ಕಾರಿನಲ್ಲಿ ಮನೆಯತ್ತ ತೆರಳುವಾಗ ಕೆ.ಸಿ. ರಸ್ತೆಯಲ್ಲಿ ನಾಲ್ವರು ಬಂದೂಕುಧಾರಿಗಳು ಕಾರನ್ನು ಅಡ್ಡಗಟ್ಟಿ ಗುಂಡು ಹಾರಿಸಿ ಕೊಲೆ ಮಾಡಿದ್ದರು. ಗುಂಡಿನ ಚಕಮಕಿಯಲ್ಲಿ ಆರೋಪಿ ಉತ್ತರ ಪ್ರದೇಶದ ವಿವೇಕಕುಮಾರ ಉಪಾಧ್ಯ ಎಂಬಾತ ಮೃತಪಟ್ಟಿದ್ದ.

Gayathri SG

Recent Posts

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

13 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

27 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

43 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

1 hour ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

1 hour ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

1 hour ago