ಬೆಳಗಾವಿ

ಕನ್ನಡ ಧ್ವಜ ಸುಟ್ಟ ಪ್ರಕರಣ: ಮೂವರು ಆರೋಪಿಗಳು ಬಂಧನ

ಬೆಳಗಾವಿ: ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಂಜು ಗುರವ್, ಸಚಿನ ಗುರವ್ ಹಾಗೂ ಗಣೇಶ್ ಪೆಡ್ನೆಕರ್ ಎಂದು ಗುರುತಿಸಲಾಗಿದೆ. ಮೂವರು ಆರೋಪಿಗಳು ನಿನ್ನೆ (ಡಿ.20) ರಾತ್ರಿ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜ ಸುಟ್ಟುಹಾಕಿದ್ದರು.

ಭಾರತೀಯ ದಂಡಸಂಹಿತೆ 153 ಎ, 295, 427, 120ಬಿ ಅಡಿಯಲ್ಲಿ ನಂದಗಡ ಪೊಲೀಸ್ ಠಾಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್​)ಯ ಪುಂಡರು ಕಳೆದ ಕೆಲವು ದಿನಗಳಿಂದ ಕನ್ನಡಿಗರ ವಿರುದ್ಧ ಕಾಲು ಕೆರೆದುಕೊಂಡು ಜಗಳಕ್ಕೆ ನಿಂತಿದ್ದಾರೆ. ಕನ್ನಡ ಧ್ವಜ ಸುಡುವುದು, ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಭಗ್ನಗೊಳಿಸುವುದು ಮತ್ತು ಬಸವಣ್ಣನ ಫೋಟೋಗೆ ಮಸಿ ಬಳಿಯುವುದು ಸೇರಿದಂತೆ ಕನ್ನಡಿಗರನ್ನು ಕೆರಳಿಸುವ ಅನೇಕ ದುಷ್ಕೃತ್ಯಗಳನ್ನು ಎಸಗುತ್ತಿದ್ದಾರೆ.

ಸದ್ಯ ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇದರ ನಡುವೆ ಎಂಇಎಸ್​ ಅನ್ನು ಬ್ಯಾನ್​ ಮಾಡುವಂತೆ ಕನ್ನಡಪರ ಹೋರಾಟಗಾರರು ಸರ್ಕಾರವನ್ನು ಒತ್ತಾಯಿಸಿದ್ದು, ಬೆಳಗಾವಿಯಲ್ಲಿ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ ಮುಂದುವರಿದಿದೆ.

Gayathri SG

Recent Posts

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

47 seconds ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

6 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

15 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

36 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

45 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago