News Karnataka Kannada
Friday, May 10 2024
ಬೆಳಗಾವಿ

ಗೋಕಾಕ್‌: ರಸ್ತೆ ಅಪಘಾತದಲ್ಲಿ ಮೂವರು ಸಾವು

Accident Ckm Car Main 08072021
Photo Credit :

ಬೆಳಗಾವಿ: ಜಿಲ್ಲೆಯ ಗೋಕಾಕ್‍ ತಾಲ್ಲೂಕಿನಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.

ಈ ಘಟನೆ ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಹುನಶ್ಯಾಲ್‍ ಗ್ರಾಮದಲ್ಲಿ ಕಾರ್ ವೊಂದು ಗೋಕಾಕ್‍ ಕಡೆ ತೆರಳುತ್ತಿದ್ದ ಎರಡು ದ್ವಿಚಕ್ರ ವಾಹನಗಳ ಮೇಲೆ ಹರಿದು ಈ ಅವಘಡ ಸಂಭವಿಸಿದೆ.

ಅತಿ ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರೊಂದು 2 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 3 ಜನ ಮೃತಪಟ್ಟ ದುರ್ಘಟನೆ ನಡೆದಿದೆ.

ಗೋಕಾಕದಿಂದ ಹುಣಶ್ಯಾಳದ ಕಡೆ ಹೊರಟಿದ್ದ, ಎರಡು ಬೈಕ್ ಗಳಿಗೆ ಎದುರಿಗೆ ಮೂಡಲಗಿಯಿಂದ ಗೋಕಾಕ ಕಡೆ ಬರುತ್ತಿದ್ದ ಸ್ವೀಪ್ಟ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಮೂವರು ದುರ್ಮರಣಕ್ಕಿಡಾಗಿದ್ದಾರೆ.

ಮೃತ ದುರ್ದೈವಿಗಳನ್ನು ಹುಣಶ್ಯಾಳದ ನಾಗಪ್ಪ ಮಗ್ಯಾಪ್ಪಗೋಳ, ಗೋಪಾಲ ಮತ್ನಾಳ ಎಂದು ಗುರುತಿಸಲಾಗಿದ್ದು, ಒಬ್ಬ ಮಹಿಳೆ ಕೂಡ ಮೃತರಾಗಿದ್ದಾರೆ. ಇವರ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಘಟಪ್ರಭಾ ಪೊಲೀಸರು ಪ್ರಾಥಮಿಕ ತನಿಖೆಯನ್ನು ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು