Categories: ಬೆಳಗಾವಿ

ಜೀವಂತ ಇರುವವರನ್ನು  ಮಾತನಾಡಿಸಿ, ನಾನು ಜೀವಂತ ಇಲ್ಲ: ರಮೇಶ್‌ ಕುಮಾರ್‌

ಬೆಳಗಾವಿ : ತಾವಾಡಿದ ಮಾತುಗಳು ರಾಷ್ಟ್ರಾದ್ಯಂತ ಪ್ರತಿಧ್ವನಿಸಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಅವರ ಕೋಪ ಇನ್ನೂ ತಣ್ಣಿದಿಲ್ಲ.

ಸುವರ್ಣಸೌಧಕ್ಕೆ ಬಂದ ಅವರನ್ನು ಎಂಇಎಸ್‌ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಕೇಳಿದಾಗ ಪ್ರತಿಕ್ರಿಯಿಸಲು ನಿರಾಕರಿಸಿದರು, ಮಾಧ್ಯಮಗಳ ಮುಂದೆ ಬಂದ ಅವರು ಕೈ ಮುಗಿದು ಒಳ ಹೋದರು. ಈ ಸಂದರ್ಭದಲ್ಲಿ ಅವರು ‘ಜೀವಂತ ಇರುವವರನ್ನು  ಮಾತನಾಡಿಸಿ, ನಾನು ಜೀವಂತ ಇಲ್ಲ. ನಾಲ್ಕುದಿನಗಳ ಹಿಂದೆಯೇ ಸತ್ತು ಹೋಗಿದ್ದೇನೆ’ ಎಂದರು.

ಯಾವುದೇ ಪ್ರಚಲಿತ ವಿಷಯಗಳ ಬಗ್ಗೆ ಉತ್ಸಾಹದಿಂದ ಪ್ರತಿಕ್ರಿಯೆ ನೀಡುತ್ತಿದ್ದ ಅವರು ಈ ರೀತಿ ಮಾತನಾಡಿದ್ದು ಆಶ್ಚರ್ಯ ಉಂಟು ಮಾಡಿತು. ಇದು ಮಾಧ್ಯಮಗಳ ಮೇಲೆ ಅವರಿಗೆ ಉಂಟಾಗಿರುವ ಸಿಟ್ಟಿನ ಸಂಕೇತವೂ ಆಗಿರಬಹುದು ಎಂದು ಹೇಳಲಾಗುತ್ತಿದೆ.

ಸದನದಲ್ಲಿ ಬೆಳೆವಿಮೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಅವರಾಡಿದ ಮಾತುಗಳು ಸಂವೇದನಾಶೀಲರ ಸಿಟ್ಟಿಗೆ ಕಾರಣವಾಗಿತ್ತು. ಪಕ್ಷಬೇಧವಿಲ್ಲದೇ ಎಲ್ಲರೂ ಆ ಮಾತುಗಳನ್ನು ಖಂಡಿಸಿದ್ದರು. ಇದರಿಂದ ಕಾಂಗ್ರೆಸ್‌ ಕೂಡ ಮುಜುಗರಕ್ಕೆ ಒಳಗಾಗುವ ಸ್ಥಿತಿ ನಿರ್ಮಾಣವಾಗಿತ್ತು.

Gayathri SG

Recent Posts

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

16 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

43 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

3 hours ago