ಬೆಳಗಾವಿ

ಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣ: ಬ್ಯಾಂಕ್ ಕ್ಯಾಶಿಯರ್ ಸೇರಿ ಮೂವರು ಆರೋಪಿಗಳ ಬಂಧನ

ಬೆಳಗಾವಿ : ಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ಇದೀಗ ಬ್ಯಾಂಕ್ ಕ್ಯಾಶಿಯರ್ ನನ್ನೇ ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡದಲ್ಲಿ ನಡೆದಿದೆ.

ನಕಲಿ ಕೀ ಬಳಲಿ ಡಿಸಿಸಿ ಬ್ಯಾಂಕ್ ನಲ್ಲಿ 4.37 ಕೋಟಿ ನಗದು, 1.63 ಕೋಟಿ ಚಿನ್ನಾಭರಣ ದರೋಡೆ ಪ್ರಕರಣ ಬೆನ್ನು ಹತ್ತಿದ ಪೊಲೀಸರು ಇದೀಗ ಬ್ಯಾಂಕ್ ಕ್ಯಾಶಿಯರ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬ್ಯಾಂಕ್ ಕ್ಯಾಶಿಯರ್ ಆಗಿದ್ದ ಬಸವರಾಜ್ (30), ಸಂತೋಷ್ ಕಂಬಾರ (31) ಹಾಗೂ ಗಿರೀಶ್ ಬಳವಲ್ಲ(26) ಬಂಧಿತರು. ಅದ್ದೂರಿಯಾಗಿ ಮದುವೆಯಾಗಬೇಕು ಎಂಬ ಕಾರಣಕ್ಕೆ ಬ್ಯಾಂಕ್ ಕ್ಯಾಶಿಯರ್ ಬಸವರಾಜ್ ತನ್ನ ಗೆಳೆಯರೊಂದಿಗೆ ಸೇರಿ ನಕಲಿ ಕೀ ಬಳಸಿ ಮಾರ್ಚ್ 6ರಂದು ಮುರಗೋಡ ಡಿಸಿಸಿ ಬ್ಯಾಂಕ್ ನಲ್ಲಿ ಕಳ್ಳತನ ಮಾಡಿದ್ದ.

ಹೀಗೆ ಕದ್ದ ಹಣ, ಚಿನ್ನಾಭರಣಗಳನ್ನು ಕಬ್ಬಿನ ಗದ್ದೆಯಲ್ಲಿ ಹೂತಿಟ್ಟಿದ್ದ. ಇದೀಗ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ನಗದು, ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

Gayathri SG

Recent Posts

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

13 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

41 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

49 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

50 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

59 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

1 hour ago