ಬೆಳಗಾವಿ : ಜನಸಾಮಾನ್ಯರಿಗೆ ಒಂದು ರೂಲ್ಸ್ ಜನಪ್ರತಿನಿಧಿಗಳಿಗೆ ಒಂದು ರೂಲ್ಸ್..? ಎನ್ನುವಂತಾಗಿದೆ ಇಲ್ಲಿನ ಸ್ಥಿತಿಗತಿ.

ಮುಜರಾಯಿ ಇಲಾಖೆ ಸಚಿವೆ  ಶಶಿಕಲಾ ಜೊಲ್ಲೆ   ಗುರುವಾರ ಸವದತ್ತಿ ಯಲ್ಲಮ್ಮದೇವಿ  ದರ್ಶನ ಪಡೆದಿದ್ದು, ಕೊರೋನಾ  ರೂಲ್ಸ್‌ಗಳನ್ನು ಮರೆತು ದೇವಾಲಯಕ್ಕೆ ತೆರಳಿದ್ದಾರೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇಗುಲಕ್ಕೆ ತೆರಳಿದ್ದ ಶಶಿಕಲಾ ಜೊಲ್ಲೆ  ಮಾಸ್ಕ್  ಧರಿಸದೇ ಸಾಮಾಜಿಕ ಅಂತರ  ಕಾಯ್ದುಕೊಳ್ಳದೇ ದೇವಿಯ ದರ್ಶನ ಪಡೆದಿದ್ದಾರೆ.

ಮಾಸ್ಕ್ ಇಲ್ಲದೇ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ಇಲ್ಲಿ ಅನುಮತಿ ಇಲ್ಲ.  ಆದರೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರಿಂದಲೇ ಕೋವಿಡ್ ರೂಲ್ಸ್ ಬ್ರೇಕ್ ಆಗಿದೆ.

ಸಚಿವೆ ಶಶಿಕಲಾ ಜೊಲ್ಲೆ  ಪತಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ  ಕೂಡ ಇವರಿಗೆ ಸಾಥ್ ನೀಡಿದ್ದು, ಈ ವೇಳೆ ಯಾವುದೆ ಕೊರೋನಾ ನಿಯಮಗಳನ್ನು ಪಾಲಿಸಿಲ್ಲ.

ಸ್ಥಳೀಯ ಶಾಸಕ ಆನಂದ ಮಾಮನೆ  ಹಾಗು ಜೊಲ್ಲೆ ದಂಪತಿಗೆ ಇಲ್ಲಿ ಸನ್ಮಾನವನ್ನು ಮಾಡಲಾಗಿದ್ದು ಈ ವೇಳೆ ಸಂಪೂರ್ಣವಾಗಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಲಾಗಿದೆ.

ಸಾಮಾನ್ಯರಿಗೆ ತಿಳಿ ಹೇಳಬೇಕದಾ ಜನಪ್ರತಿನಿಧಿಗಳೇ ಈ ರೀತಿ ರೂಲ್ಸ್ ಬ್ರೇಕ್ ಮಾಡಿದರೆ ಇನ್ನು ಸಾಮಾನ್ಯರು ಹೇಗೆ. ಅಲ್ಲದೇ ದೇಗುಲದಲ್ಲಿ ಜನರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೆ ಒಂದು ನ್ಯಾಯವೇ ಎನ್ನುವ ಪ್ರಶ್ನೆ ಮೂಡಿದೆ.

Raksha Deshpande

Recent Posts

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

45 seconds ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

14 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

38 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

1 hour ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago