ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿನ ವಸತಿ ಶಾಲೆಯೊಂದರಲ್ಲಿ ಊಟ ಸೇವಿಸಿದಂತ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ, ರಾಮದುರ್ಗ ಪಟ್ಟಣದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿನ ಸರ್ಕಾರಿ ಮೆಟ್ರಿಕ್ ನಂತ್ರದ ಬಾಲಕಿಯರ ವಸತಿ ಶಾಲೆಯಲ್ಲಿ ಊಟ ಮಾಡಿದಂತ 14 ವಿದ್ಯಾರ್ಥಿನಿಯರಿಗೆ ವಾಂತಿ, ಬೇಧಿ, ಹೊಟ್ಟೆನೋವು ಕಾಣಿಸಿಕೊಂಡಿದೆ.
ಕೂಡಲೇ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ನಾಲ್ವರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದ್ದ ಕಾರಣ, ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಹಾಸ್ಟೆಲ್ ಅವ್ಯವಸ್ಥೆಯ ಬಗ್ಗೆ ವಿದ್ಯಾರ್ಥಿನಿಯರು ಕಿಡಿಕಾರಿದ್ದಾರೆ.