ಬೆಳಗಾವಿ: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಬೆಳಗಾವಿ ಸದಾಶಿವ ನಗರದಲ್ಲಿರುವ ವಿಜಯ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ, ಹಿಜಾಬ್, ಬುರ್ಖಾ ಧರಿಸಿ ಕಾಲೇಜಿಗೆ ಆಗಮಿಸುತ್ತಿರುವ ಕೆಲ ವಿದ್ಯಾರ್ಥಿನಿಯರು ಪ್ರತ್ಯೇಕ ಕೊಠಡಿಯಲ್ಲಿ ಹಿಜಾಬ್ ತಗೆದಿಟ್ಟು ತರಗತಿಗೆ ಹಾಜರಾಗಿದ್ದಾರೆ
ವಿಜಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ನಿನ್ನೆ ಹಿಜಾಬ್ಗೆ ಅವಕಾಶ ಕೋರಿದ್ದರು.ಇಂದು ಕೂಡ ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ.ಕಾಲೇಜಿಗೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.