ಬೆಳಗಾವಿ

ಮಕ್ಕಳಿಗೆ ಬಾಳೆಹಣ್ಣು ಅಥವಾ ಕೆಎಂಎಫ್‌ನ ಕಡ್ಲೆ ಮಿಠಾಯಿ ಸಾಧ್ಯತೆ

ಬೆಳಗಾವಿ: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ 1ರಿಂದ 8ನೇ ತರಗತಿವರೆಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ನೀಡುತ್ತಿರುವ ಕೋಳಿಮೊಟ್ಟೆ/ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ.ಅನುದಾನ ಲಭ್ಯತೆ ಆಧಾರದ ಮೇಲೆ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆ ಹಣ್ಣು ಹಾಗೂ ಕಡ್ಲೆ ಮಿಠಾಯಿ ಎರಡೂ ನೀಡಲು ಸಹ ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸಿದೆ

ಇನ್ನು ಯೋಜನೆಯಲ್ಲಿ ಸದ್ಯದಲ್ಲೇ ಹೊಸ ಆಯ್ಕೆಯಾಗಿ ಕೆಎಂಎಫ್‌ನ ಕಡ್ಲೆ ಮಿಠಾಯಿ ಕೂಡ ಸೇರಿಕೊಳ್ಳಲಿದೆ. ಅಂದರೆ ಬಾಳೆಹಣ್ಣು ಬೇಡವಾದರೆ ಮಕ್ಕಳು ಚಿಕ್ಕಿ ಸೇವಿಸಬಹುದಾಗಿದೆ.

ಇದೀಗ ಎಲ್ಲ ಅವಧಿಯಲ್ಲೂ ಸಾಕಷ್ಟು ಪ್ರಮಾಣದಲ್ಲಿ ಬಾಳೆಹಣ್ಣು ಪೂರೈಕೆ ಸಾಧ್ಯವಾಗದಿರಬಹುದು ಎಂಬ ಕಾರಣಕ್ಕೆ ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಆಯ್ಕೆ ನೀಡುವ ಸಲುವಾಗಿ ಬಾಳೆಹಣ್ಣಿಗೆ ಪರ್ಯಾಯವಾಗಿ ಕೆಎಂಎಫ್‌ನಿಂದ ತಯಾರಿಸಿದ ಕಡ್ಲೆ ಮಿಠಾಯಿ ನೀಡಲು ಸರ್ಕಾರ ಮುಂದಾಗಿದೆ. ಒಂದು ವೇಳೆ ಇರುವ ಅನುದಾನದಲ್ಲೆ? ಸಾಧ್ಯವಾಗುವುದಾದರೆ ಬಾಳೆಹಣ್ಣು ಮತ್ತು ಕಡ್ಲೆ ಮಿಠಾಯಿ ಎರಡನ್ನೂ ಕೊಡುವ ಆಲೋಚನೆಯೂ ಶಿಕ್ಷಣ ಇಲಾಖೆಗಿದೆ ಎಂದು ಮೂಲಗಳು ತಿಳಿಸಿವೆ.

 

ಬಹು ಪೌಷ್ಟಿಕಾಂಶ ಕೊರತೆ ಹಾಗೂ ರಕ್ತ ಹೀನತೆಯಿಂದ ಬಳಲುತ್ತಿರುವ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಸರ್ಕಾರ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್- ಮಧ್ಯಾಹ್ನದ ಉಪಾಹಾರ ಯೋಜನೆಯಲ್ಲಿ ಈಗಾಗಲೇ ಡಿಸೆಂಬರ್ ತಿಂಗಳಿಂದ ಕೋಳಿ ಮೊಟ್ಟೆನೀಡಲಾಗುತ್ತಿದೆ. ಕೋಳಿಮೊಟ್ಟೆ ಸೇವಿಸದವರಿಗೆ ಬಾಳೆಹಣ್ಣು ನೀಡಲಾಗುತ್ತಿದೆ.

 

Swathi MG

Recent Posts

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

14 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

42 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

50 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

51 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

1 hour ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

1 hour ago