ಬೆಳಗಾವಿ: ‘ಮತ ಎಣಿಕೆ ಅಧಿಕಾರಿಗಳ ಮೇಲೆ ಜವಾಬ್ದಾರಿ ಹೆಚ್ಚಾಗಿರುತ್ತದೆ. ಪ್ರತಿಯೊಬ್ಬರೂ ಮತ ಎಣಿಕೆ ವಿಧಾನ ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಪ್ರಕ್ರಿಯೆ ನಡೆಸಬೇಕು’ ಎಂದು ಚುನಾವಣಾ ವೀಕ್ಷಕರೂ ಆಗಿರುವ ಐಎಎಸ್ ಅಧಿಕಾರಿ ಏಕರೂಪ್ ಕೌರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ’ ಎಂದರು.