ಬೆಳಗಾವಿ

ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡ ಧ್ವಜ ಸುಟ್ಟು, ಚಾಳಿ ಮುಂದುವರಿಸಿದ ಶಿವಸೇನೆ

ಬೆಳಗಾವಿ : ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಕನ್ನಡಿಗರನ್ನು ಕೆಣಕುತ್ತಿರುವ ಮಹಾರಾಷ್ಟ್ರ  ಚಾಳಿ ಮುಂದುವರಿದಿದ್ದು, ಬುಧವಾರ ಮಧ್ಯಾಹ್ನ ಬೆಳಗಾವಿ ಗಡಿ ಭಾಗದ ಚೆಕ್‌ಪೋಸ್ಟ್ ಬಳಿಯೇ ಕನ್ನಡ ಧ್ವಜ ಸುಟ್ಟು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕೃತಿ ದಹಿಸಿ ಮೊಂಡುತನ ತೋರಿದ್ದಾರೆ.

ಗಡಿ ಭಾಗದ ಕಾಗವಾಡ ಸಮೀಪದ ಮೈಶಾಳ ಎಂಬ ಗ್ರಾಮದ ಬಳಿ ಇರುವ ಕರ್ನಾಟಕ ಚೆಕ್‌ಪೋಸ್ಟ್ ಬಳಿಯೇ ಶಿವಸೇನೆ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಬೆಂಗಳೂರಿನಲ್ಲಿ ಅವಮಾನ ಮಾಡಿ, ಈಗ ಬೆಳಗಾವಿಯಲ್ಲಿಯೂ ಅಗೌರವ ತೋರಿದೆ ಎಂದು ಆಪಾದಿಸಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದರು.

‘ಶಿವಾಜಿ ಮಹಾರಾಜರನ್ನು ಅವಮಾನ ಮಾಡುವುದು ಮುಂದುವರಿದಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಹಾಗೂ ಶಿವಸೇನೆ ಪ್ರಮುಖ ದಿ. ಬಾಳಾ ಠಾಕ್ರೆ ಅವರ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿರುವುದನ್ನು ಸರ್ಕಾರ ತಡೆಯುತ್ತಿಲ್ಲ. ಇನ್ನು ಮುಂದೆ ಕರ್ನಾಟಕದ ಒಳಗೆ ನುಗ್ಗಿ ಕನ್ನಡಿಗರನ್ನು ಅಟ್ಟಾಡಿಸುತ್ತೇವೆ’ ಎಂದು ಮಿರಜ್ ಶಿವಸೇನೆ ಮುಖಂಡ ಚಂದ್ರಕಾಂತ ಮೈಗೂರೆ ಕಿಡಿಕಾರಿದರು.

ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕನ್ನಡ ಬಾವುಟದ ಮೇಲೆ ನಾಯಿ ಮಲಗಿಸಿ, ಚಪ್ಪಲಿಯಿಂದ ಹೊಡೆದು, ಬಾವುಟ ಸುಟ್ಟು ಹಾಕಲಾಗಿತ್ತು. ಜತೆಗೆ ಮಿರಜ್, ಕೊಲ್ಲಾಪುರ, ಥಾಣೆಯಲ್ಲಿ ಕರ್ನಾಟಕದ ವಾಹನಗಳ ಮೇಲೆ ಶಿವಸೇನೆ ಕಾರ್ಯಕರ್ತರು ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದ್ದರು. ಹೊಟೇಲ್, ಅಂಗಡಿಗಳ ಮೇಲಿರುವ ಕನ್ನಡ ಭಾಷೆಯ ಫಲಕಗಳನ್ನು ಹರಿದು ಹಾಕಿದ್ದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago