Categories: ಬೆಳಗಾವಿ

ರಾಜ್ಯ ವ್ಯಾಪಿ ಬರೋಬ್ಬರಿ ಐದು ಲಕ್ಷ ಮನೆಗಳ ನಿರ್ಮಾಣದ ಗುರಿ: ಸಚಿವ ವಿ.ಸೋಮಣ್ಣ

ಬೆಳಗಾವಿ: ರಾಜ್ಯ ವ್ಯಾಪಿ ಬರೋಬ್ಬರಿ ಐದು ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಿದ್ದು, ಶೀಘ್ರದಲ್ಲೇ ಪಂಚಾಯಿತಿವಾರು ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ನಗರದಲ್ಲಿಂದು ಪರಿಷತ್ತಿನ ಪ್ರಶ್ನೋತ್ತರ ವೇಳೆ ಕೆ.ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಎಸ್ಸಿ-ಎಸ್ಟಿ ಸೇರಿದಂತೆ ಎಲ್ಲಾ ವರ್ಗದ ಜನರಿಗೆ ಮನೆ ಹಂಚಿಕೆಗೆ ಸರ್ಕಾರ ನಿರ್ಧಾರ ಕೈಗೊಂಡಿದ್ದು,ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರೊಂದಿಗೆ ಚರ್ಚೆ ನಡೆಸಿ ಐದು ಲಕ್ಷ ಮನೆಗಳ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದರು.

ಪ್ರಮುಖವಾಗಿ ಪಂಚಾಯತಿ ವಾರು ಮನೆಗಳ ಅವಶ್ಯಕತೆ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ.ಈ ಸಮೀಕ್ಷಾ ವರದಿ ಜನವರಿ ಅಂತ್ಯದ ವೇಳೆಗೆ ಕೈಸೇರಲಿದ್ದು, ಆನಂತರ ಮನೆ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಮುಂದಿನ ವಾರ್ಷಿಕ ಸಾಲಿನ ಡಿಸೆಂಬರ್ ವೇಳೆಗೆ ಬರೋಬ್ಬರಿ ೫ ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು. ಜೊತೆಗೆ, ಬುಡಕಟ್ಟು ಸಮುದಾಯದವರಿಗೂ ಸೂರು ದೊರಕಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು

Gayathri SG

Recent Posts

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

25 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

33 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

35 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

56 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

1 hour ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

1 hour ago