ನವದೆಹಲಿ: ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 21ಕ್ಕೆ ಏರಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಯಲ್ಲಿ ಮಂಡಿಸಿದರು. ‘ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಮಸೂದೆ-2021’ ಅನ್ನು ಮಂಡಿಸಿ ‘ದೇಶದ ಇತಿಹಾಸದಲ್ಲಿಯೇ ಇದು ನಿರ್ಣಾಯಕ ಹೆಜ್ಜೆಯಾಗಿದೆ’ ಎಂದರು.
ಈ ಮಸೂದೆಗೆ ವಿರೋಧ ಪಕ್ಷಗಳ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು.ಹೀಗಾಗಿ ಸಮಗ್ರ ಪರಿಶೀಲನೆಗಾಗಿ ಮಸೂದೆಯನ್ನು ಸಂಸದೀಯ ಸಮಿತಿಗೆ ಒಪ್ಪಿಸಲಾಯಿತು.ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು ಈಗಿನ 18 ವರ್ಷದಿಂದ 21 ವರ್ಷಕ್ಕೆ ಏರಿಸುವುದಕ್ಕೆ ಅವಕಾಶ ನೀಡುವ
ವಿರೋಧ ಪಕ್ಷಗಳ ಕೆಲ ಸದಸ್ಯರು ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ‘ಈ ಮಸೂದೆಯಿಂದ ಕೆಲ ವೈಯಕ್ತಿಕ ಕಾಯ್ದೆಗಳು ಹಾಗೂ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ’ ಎಂದು ವಾದಿಸಿದರು.