Categories: ಬೆಳಗಾವಿ

ವಿಶೇಷ ಪೂಜಾ ಕಾರ್ಯಗಳಿಗೆ ಚಾಲನೆ ನೀಡಿದ ಶಶಿಕಲಾ  ಜೊಲ್ಲೆ

ಸವದತ್ತಿ : ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾಗಿ ಆಚರಿಸುವ ವಿಜಯದಶಮಿಯ ಸಂಧರ್ಭದಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು  ನಡೆದಿದ್ದು, ಮುಜರಾಯಿ, ಸಚಿವೆ ಶಶಿಕಲಾ ಜೊಲ್ಲೆ  ಸವದತ್ತಿಯಲ್ಲಿ  ಚಾಲನೆ ನೀಡಿದರು.

ರಾಜ್ಯದ ಪ್ರಮುಖ ಶ್ರದ್ಧಾ ಕೇಂದ್ರವಾದ ಬೆಳಗಾವಿ ಜಿಲ್ಲೆಯ  ಸವದತ್ತಿ ಯಲ್ಲಮ್ಮದೇವಿ ದೇವಾಲಯದಲ್ಲಿ  ಶುಕ್ರವಾರ ಬೆಳಗ್ಗೆ ರಾಜ್ಯದ ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ ಶಶಿಕಲಾ  ಜೊಲ್ಲೆ  ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ನಾಡಿನಾದ್ಯಂತ ನಡೆಯುವ ವಿಶೇಷ ಪೂಜಾ ಕೈಂಕರ್ಯಗಳಿಗೆ ಚಾಲನೆ ನೀಡಿದರು.

ಮುಂಜಾನೆ ಆರು ಗಂಟೆಗೆ ಯಲ್ಲಮ್ಮ ದೇವಾಲಯಕ್ಕೆ ಆಗಮಿಸಿದ ಸಚಿವೆ ಜೊಲ್ಲೆ ದೇವಾಲಯದಲ್ಲಿ ಕೋವಿಡ್  ಹಿನ್ನೆಲೆಯಲ್ಲಿ ನಮ್ಮ ನಾಡಿನ ಸಾರ್ವಜನಿಕರಿಗೆ ಅದರಲ್ಲೂ ವಿಶೇಷವಾಗಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಅನುಗ್ರಹಿಸಬೇಕೆಂದು ದೇವಿಯಲ್ಲಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು.

ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ತೊಂದರೆ ಗೊಳಗಾಗಿದ್ದು, ಮಕ್ಕಳು ಶಾಲೆಯತ್ತ ಮುಖ ಮಾಡದೇ ಮನೆಯಲ್ಲೇ ಇರುವಂತಾಗಿದೆ. ಸದ್ಯ ಶಾಲೆಗಳು  ತೆರೆದಿದ್ದು, ಮಕ್ಕಳಿಗೂ ಯಾವುದೇ ಸಮಸ್ಯೆಯಾಗಬಾರದೆಂದು  ಪ್ರಾರ್ಥಿಸಿದರು.  ಕೋವಿಡ್ ಸೋಂಕಿನಿಂದ ತೊಂದರೆಯಾಗಿರುವ ನಾಡಿನ ಜನರು ಸುಭಿಕ್ಷ ವಾತಾವರಣದಲ್ಲಿ ಜೀವಿಸುವಂತೆ ಅನುಗ್ರಹಿಸಬೇಕೆಂದು ಕೋರಿದರು.

ನಂತರ ದೇವಾಲಯದ ಅಧಿಕಾರಿಗಳು ಹಾಗೂ ಅರ್ಚಕರೊಂದಿಗೆ ಚರ್ಚಿಸಿದ ಅವರು, ದೇವಾಲಯದ ಅಗತ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಸವದತ್ತಿ ಶ್ರೀಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಲೋಚನೆ ನಡೆಸಿ ವಿಸ್ತೃತ ಪ್ರಸ್ತಾವನೆ ಮತ್ತು ಕ್ರಿಯಾ ಯೋಜನೆ ರೂಪಿಸಲು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಇಂದಿನ ವಿಜಯ ದಶಮಿ  ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆಯಾಗದಂತೆ , ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆಗಳನ್ನು ನೆರವೇರಿಸಲಾಗಿದೆ ಎಂದು ಹೇಳಿದರು.

ರಾಜ್ಯದ ಎಲ್ಲ ದೇವಾಲಯಗಳಲ್ಲಿ ಭಕ್ತ ಸಮೂಹಕ್ಕೆ ಅತ್ಯುತ್ತಮ ಸೌಕರ್ಯ ಒದಗಿಸುವುದು ಹಾಗೂ ಉತ್ತಮ ಆಧ್ಯಾತ್ಮಿಕ ವಾತಾವರಣ ನಿರ್ಮಾಣವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ತಾವು ಸಚಿವರಾದ ನಂತರ ಇಲಾಖೆಗೆ ಸಂಬಂಧಿಸಿದಂತೆ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದೇವಾಲಯಗಳ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದು, ಮತ್ತು ತ್ವರಿತಗತಿಯಲ್ಲಿ ದೇವಾಲಯಗಳ ಸೇವೆ ದೊರೆಯುವಂತೆ ಮಾಡಲು  ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ  ಎಂದು ಶಶಿಕಲಾ ಜೊಲ್ಲೆ ಹೇಳಿದರು.

ವಿಶೇಷ ಪೂಜೆಗೆ ಸಚಿವರನ್ನು ದೇವಾಲಯದ ಅಧಿಕಾರಿಗಳು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ ಸಂಸದರಾದ ಅಣ್ಣಾ ಸಾಹೇಬ ಜೊಲ್ಲೆ, ಸ್ಥಳೀಯ ಶಾಸಕರಾದ ಆನಂದ ಮಾಮನಿ, ದೇವಾಲಯದ ಪ್ರಮುಖರಾದ ಕೋಟರಗಸ್ತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

Raksha Deshpande

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

16 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

31 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago