News Karnataka Kannada
Sunday, April 28 2024
ಬೆಳಗಾವಿ

ವೈದ್ಯಕೀಯ ವಿದ್ಯಾರ್ಥಿಗಳ ನಡುವೆ ಗಲಾಟೆ: 15 ವಿದ್ಯಾರ್ಥಿಗಳು ಅಮಾನತು

Suspended
Photo Credit :

ಬೆಳಗಾವಿ: ಕಾಲೇಜು ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದ ಘಟನೆ ಬೆಳಗಾವಿಯ ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಬಿಮ್ಸ್ ಕಾಲೇಜು ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಎಂಬಿಬಿಎಸ್ 4ನೇ ವರ್ಷದ ವಿದ್ಯಾರ್ಥಿಗಳು ಬುರಾರಾಮ್ ಗೋಧರೆ ಎಂಬ ವಿದ್ಯಾರ್ಥಿಯ ರೂಮಿಗೆ ನುಗ್ಗಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ.

15 ಎಂಬಿಬಿಎಸ್ ವಿದ್ಯಾರ್ಥಿಗಳು ಹಾಸ್ಟೆಲ್ ರೂಮಿಗೆ ನುಗ್ಗಿ ಬುರಾರಾಮ್ ಮೇಲೆ ಹಲ್ಲೆ ನಡೆಸಿದ್ದು, ಬುರಾರಾಮ್ ಮೂಗು, ಕಿವಿ, ಬೆರಳುಗಳಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳು ಬುರಾರಾಮ್ ಮೂಗಿನ ಶಸ್ತ್ರಚಿಕಿತ್ಸೆಗಾಗಿ ಉದಯಪುರಕ್ಕೆ ಶಿಫ್ಟ್ ಮಾಡಲಾಗಿದೆ. ಮೇ 4ರಂದು ನಡೆದಿದ್ದ ಗಲಾಟೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆ ಪ್ರಕರಣ ಸಂಬಂಧ ಬಿಮ್ಸ್ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಬೆಳಗಾವಿ ಎ ಪಿ ಎಸ್ ಸಿ ಪೊಲೀಸ್ ಠಾಣೆಗೆ ದೂರು ನೀಡಿದೆ. ಪ್ರಕರಣ ಸಂಬಂಧ 15 ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಗಲಾಟೆ ಪ್ರಕರಣ ಸಂಬಂಧ ಇದೀಗ ಕಾಲೇಜು ಆಡಳಿತ ಮಂಡಳಿ 15 ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು