News Karnataka Kannada
Thursday, May 02 2024
ಬೆಳಗಾವಿ

ಸಂಕೇಶ್ವರ: ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದ ಮಹಿಳೆ ಹತ್ಯೆ

Gun
Photo Credit :

ಸಂಕೇಶ್ವರ (ಜ. 17) : ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯನ್ನು ಅಪರಿಚಿತರು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಬೆಳ​ಗಾವಿ ಜಿಲ್ಲೆ ಹುಕ್ಕೇರಿ ತಾಲೂ​ಕಿ​ನ ಸಂಕೇ​ಶ್ವ​ರ ಪಟ್ಟಣದ ಸಂಸುದ್ದಿ ಗಲ್ಲಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಶೈಲಾ ನಿರಂಜನ ಸುಭೇದಾರ (56) ಕೊಲೆಯಾದ ಮಹಿಳೆ. ಮೃತ ಮಹಿಳೆಯ ಎದೆಗೆ ಎರಡು, ಕೈಗೆ ಒಂದು ಗುಂಡು ತಗುಲಿದ್ದು, ಒಂದು ಗುಂಡು ಸ್ಥಳದಲ್ಲಿ ಪತ್ತೆಯಾಗಿದೆ. ಕೊಲೆಗೆ ಕಂಟ್ರಿ ಪಿಸ್ತೂಲ್‌ ಬಳಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿದೆ.

ಶೈಲಾ ಬಡ್ಡಿಗೆ ಹಣ ನೀಡುತ್ತಿದ್ದರು ಎನ್ನಲಾಗಿದೆ. ಆಸ್ತಿ ವಿವಾದ ಹಾಗೂ ಹಣದ ವ್ಯವಹಾರವೇ ಕೊಲೆಗೆ ಕಾರಣ ಎಂದು ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಸಂಕೇಶ್ವರ ಪೋಲಿಸ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು