Categories: ಬೆಳಗಾವಿ

ಸಂತೋಷ್ ಪಾಟೀಲ್ ನಿವಾಸಕ್ಕೆ ಭೇಟಿ ಕೊಟ್ಟು 11 ಲಕ್ಷ ಪರಿಹಾರ ಚೆಕ್ ವಿತರಿಸಿದ ಡಿ.ಕೆ. ಶಿ

ಬೆಳಗಾವಿ : ಮಾಜಿ ಸಚಿವ ಈಶ್ವರಪ್ಪ ಅವರ 40 % ಕಮಿಷನ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ನಿವಾಸಕ್ಕೆ ಮಂಗಳವಾರ ಭೇಟಿ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಸಂತೋಷ್ ಪಾಟೀಲ್ ಅವರ ಪತ್ನಿಗೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದರು.

ಸಂತೋಷ್ ಪಾಟೀಲ್ ಅವರು ಸಾವನ್ನಪ್ಪಿದಾಗ ಅವರ ನಿವಾಸಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗದಲ್ಲಿದ್ದ ಡಿ. ಕೆ. ಶಿವಕುಮಾರ್ ಅವರು 11 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಬೆಳಗಾವಿಗೆ ತೆರಳಿ ಪರಿಹಾರ ನೀಡಿದ್ದಾರೆ.

ಇದಲ್ಲದೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ವೈಯಕ್ತಿಕವಾಗಿ 5 ಲಕ್ಷ ರು. ಪರಿಹಾರ ಚೆಕ್ ನೀಡಿದರು.

ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಹಂತೇಶ್ ಎಸ್ ಕೌಜಲಗಿ,ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago