News Karnataka Kannada
Tuesday, May 14 2024
ಬೆಳಗಾವಿ

ಹಿಜಾಬ್ ವಿವಾದ: ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಾಥ್ ನೀಡಿದ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಪೊಲೀಸ್

Photo Credit :

ಬೆಳಗಾವಿ : ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ತರಗತಿಗಳಿಗೆ ತೆರಳುವುದಾಗಿ ಪಟ್ಟು ಹಿಡಿದಿದ್ದಾರೆ. ಈ ನಡುವೆ ಬೆಳಗಾವಿ ವಿಜಯ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ನಡೆಸುತ್ತಿದ್ದ ಪ್ರತಿಭಟನೆಗೆ ಮುಸ್ಲಿಂ ಯುವಕರು ಸಾಥ್ ನೀಡಿದ್ದು, ಪರಿಸ್ಥಿತಿ ಉದ್ವಿಗ್ನಕ್ಕೆ ಕಾರಣವಾಗಿದೆ.

ಬೆಳಗಾವಿ ವಿಜಯ ಪ್ಯಾರಾಮೆಡಿಕಲ್ ಕಾಲೇಜಿಗೆ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸಿದ್ದರು. ಈ ವೇಳೆ ಕಾಲೇಜು ಸಿಬ್ಬಂದಿಗಳು ಹಿಜಾಬ್ ತೆಗೆದು ತರಗತಿಗೆ ಬರುವಂತೆ ಸೂಚಿಸಿದ್ದಾರೆ. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಕಾಲೇಜು ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಲೇಜಿಗೆ ಸಂಬಂಧವೇ ಪಡದ ಕೆಲ ಮುಸ್ಲಿಂ ಯುವಕರು ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಾಥ್ ನೀಡಿದ್ದಲ್ಲದೇ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶ ನೀಡುವಂತೆ ಕಾಲೇಜು ಆಡಳಿತಮಂಡಳಿ ಜತೆ ವಾಗ್ವಾದಕ್ಕಿಳಿದಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಡಿಸಿಪಿ ರವೀಂದ್ರ ಗಡಾದ್ ಭೇಟಿ ನೀಡಿ, ವಿದ್ಯಾರ್ಥಿನಿಯರ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ಯುವಕರ ಗುಂಪು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಹಿಜಾಬ್ ಪರ ಘೋಷಣೆ ಕೂಗಲು ಆರಂಭಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ಸ್ಥಳಕ್ಕೆ ಧಾವಿಸಿ, ಪ್ರತಿಭಟನೆಯಲ್ಲಿ ತೊಡಗಿದ್ದ ನಾಲ್ವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು