ಬೆಳಗಾವಿ : 2030ರೊಳಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಟಾಸ್ಕ್ ಪೋರ್ಸ್ ಸಮಿತಿ ರಚನೆ ಆಗಿದೆ. ಅಂಗನವಾಡಿ ಮತ್ತು ಪ್ರಾಥಮಿಕ ಶಿಕ್ಷಣ ಶಿಕ್ಷಕರಿಗೆ ತರಬೇತಿ ನೀಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವ ಬಿ.ಸಿ.ನಾಗೇಶ್, 2030ರೊಳಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ.
ಮುಂದಿನ ವರ್ಷದಲ್ಲಾದ್ರೂ ರಾಷ್ಟ್ರೀಯ ಶಿಕ್ಷಣ ನೀತಿ ಪರಿಚಯಿಸುವ ಇರಾದೆ ಇದೆ. ಆತುರವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಪರಿಚಯಿಸುವುದಿಲ್ಲ. ತರಬೇತಿ ಕೊಡದೇ ಎನ್ ಇಪಿ ಪರಿಚಯಿಸುವುದಿಲ್ಲ ಎಂದು ಹೇಳಿದ್ದಾರೆ.
.