News Karnataka Kannada
Monday, April 29 2024
ಬೆಳಗಾವಿ

ಕಂದಾಯ ಇಲಾಖೆ ಎಲ್ಲಾ ಕಚೇರಿಗಳು ಶೀಘ್ರದಲ್ಲೇ  ಡಿಜಿಟಲೀಕರಣಗೊಳ್ಳುವುದು: ಕೃಷ್ಣ ಬೈರೇಗೌಡ

ಕಂದಾಯ ಇಲಾಖೆಯಲ್ಲಿನ ಹಳೆಯ ದಾಖಲೆಗಳು ಶಿಥಿಲಾವಸ್ಥೆ ತಲುಪಿವೆ. ದಾಖಲೆ ಪಡೆಯಲು ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಕಂದಾಯ ಇಲಾಖೆ ಎಲ್ಲಾ ಕಚೇರಿಗಳನ್ನು ಶೀಘ್ರದಲ್ಲೇ  ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು  ಹೇಳಿದರು.
Photo Credit : News Kannada

ಬೆಳಗಾವಿ: ಕಂದಾಯ ಇಲಾಖೆಯಲ್ಲಿನ ಹಳೆಯ ದಾಖಲೆಗಳು ಶಿಥಿಲಾವಸ್ಥೆ ತಲುಪಿವೆ. ದಾಖಲೆ ಪಡೆಯಲು ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಕಂದಾಯ ಇಲಾಖೆ ಎಲ್ಲಾ ಕಚೇರಿಗಳನ್ನು ಶೀಘ್ರದಲ್ಲೇ  ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು  ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರಾಜ್ಯದ ಜನತೆಗೆ ತ್ವರಿತ ಮತ್ತು ಪಾರದರ್ಶಕ ಸೌಲಭ್ಯಗಳನ್ನು ಒದಗಿಸಲು, ದಾಖಲೆಗಳನ್ನು ಶಾಶ್ವತವಾಗಿ ಸಂರಕ್ಷಿಸುವುದು ಮತ್ತು ನಕಲಿ ಸೃಷ್ಟಿಗೆ ತಡೆಯೊಡ್ಡುವ ಸಲುವಾಗಿ 31 ಜಿಲ್ಲೆಗಳ ತಲಾ ಒಂದು ತಾಲ್ಲೂಕಿನಲ್ಲಿ ಪ್ರಥಮ ಹಂತವಾಗಿ ಯೋಜನೆಗೆ ಚಾಲನೆ ಕೊಡಲಾಗುತ್ತಿದೆ. ಎಲ್ಲ ದಾಖಲೆಗಳನ್ನು 100 ದಿನಗಳಲ್ಲಿ ಡಿಜಿಟಲೀಕರಣ ಮಾಡಲಾಗುವುದು ಎಂದು ಹೇಳಿದರು.

ಕಂದಾಯ ಇಲಾಖೆಯಲ್ಲಿ ತಹಶೀಲ್ದಾರ್ ಅಧೀನದಲ್ಲಿರುವ ಪ್ರಕರಣಗಳನ್ನು ಮೂರು ತಿಂಗಳೊಳಗೆ ಇತ್ಯರ್ಥಪಡಿಸಬೇಕು ಮತ್ತು ಸಹಾಯಕ ಆಯುಕ್ತರು ಅಥವಾ ಜಿಲ್ಲಾಧಿಕಾರಿಗಳ ಅಧೀನದಲ್ಲಿರುವ ಪ್ರಕರಣಗಳನ್ನು ಆರು ತಿಂಗಳೊಳಗೆ ಪರಿಹರಿಸಬೇಕು ಎಂದು ಇದೇ ವೇಳೆ ಸೂಚನೆ ನೀಡಿದರು.

ಡಿಜಿಟಲೀಕರಣದಿಂದ ದಾಖಲೆಗಳ ಕಳ್ಳತನ, ನಾಪತ್ತೆ ಅಥವಾ ದುರ್ಬಳಕೆ ಆಗುವುದನ್ನು ತಡೆಯಬಹುದು. ಜನರು ಕಚೇರಿಗಳಿಗೆ ಬರುವುದಕ್ಕಿಂತ ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಪರಿಶೀಲಿಸಬಹುದು.

ಭೂಮಿಯನ್ನು ಸರ್ವೆ ಮಾಡಲು ಅಗತ್ಯವಿರುವ ಹೈಟೆಕ್ ಉಪಕರಣಗಳ ಕಿಟ್‌ಗಳನ್ನು ಪ್ರತಿ ತಾಲೂಕು ಆಡಳಿತಕ್ಕೆ ಒದಗಿಸಲಾಗುವುದು. ಭೂಮಾಪನ ನಡೆಸಲು ಸಿಬ್ಬಂದಿ ಕೊರತೆ ಇದೆ, ಆ ಕಾರ್ಯಕ್ಕೆ 1000ಕ್ಕೂ ಹೆಚ್ಚು ಭೂಮಾಪಕರನ್ನು ಶೀಘ್ರದಲ್ಲೇ ನೇಮಿಸಲಾಗುವುದು, ಮೊದಲ ಹಂತದಲ್ಲಿ 367 ಭೂಮಾಪಕರನ್ನು ನೇಮಿಸಲಾಗುವುದು.

ತಹಶೀಲ್ದಾರ್ ಕಚೇರಿ, ಸರ್ವೆ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿಗಳ ದಾಖಲೆ ಕೊಠಡಿಗಳಲ್ಲಿ ಎಲ್ಲ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ‘ಭೂ ಸುರಕ್ಷಾ’ ಕಾರ್ಯಕ್ರಮವನ್ನು ಪ್ರತಿ ಜಿಲ್ಲೆಯಲ್ಲಿ ಒಂದೊಂದು ತಾಲೂಕಿನಲ್ಲಿ ಆರಂಭಿಸಲಾಗುವುದು.

ಸರ್ವೇಯರ್‌ಗಳ ನೇಮಕಾತಿಯನ್ನು ಕೆಪಿಎಸ್‌ಸಿ ಪರೀಕ್ಷೆ ಮೂಲಕ ಮಾಡಲಾಗುತ್ತಿದೆ. ಖಾಲಿ ಇರುವ ಇತರೆ ಹುದ್ದೆಗಳನ್ನೂ ಶೀಘ್ರದಲ್ಲೇ ಸರ್ಕಾರ ಭರ್ತಿ ಮಾಡಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು