Categories: ಬೆಳಗಾವಿ

ಯುವನಿಧಿ ಯೋಜನೆಗೆ  ಡಿಸೆಂಬರ್‌ 26 ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಳಗಾವಿ: ಕಾಂಗ್ರೆಸ್‌ ಯುವನಿಧಿ ಯೋಜನೆಗೆ  ಡಿಸೆಂಬರ್‌ 26 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಪದವೀಧರರು ಸೇವಾಸಿಂಧು  ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್‌ ತಿಳಿಸಿದ್ದಾರೆ.

ಡಿಸೆಂಬರ್ 26ರಿಂದ ಅರ್ಜಿ ಸಲ್ಲಿಕೆ ಕಾರ್ಯ ಆರಂಭವಾಗಲಿದ್ದು, ಸೇವಾಸಿಂಧು ಪೋರ್ಟಲ್ ಮೂಲಕ ಅರ್ಹರು ಅರ್ಜಿ ಸಲ್ಲಿಸಬಹುದು. ಅರ್ಹ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ದೊರೆಯಲಿದೆ.ಎಲ್ಲ ಅರ್ಹ ನಿರುದ್ಯೋಗಿಗಳಿಗೆ ಅಗತ್ಯ ಮಾಹಿತಿ ನೀಡಲು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಯುವನಿಧಿ ಯೋಜನೆ ಎಂದರೇನು?: ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪ್ಲೋಮಾ ಕೋರ್ಸ್‌ಗಳನ್ನು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2023 ರಲ್ಲಿ ತೇರ್ಗಡೆಯಾದ ಕರ್ನಾಟಕ ರಹವಾಸಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೀಡುವ ಯೋಜನೆಯಾಗಿದೆ. ಪದವೀದಧರರಿಗೆ 3,000 ರೂ. ಮತ್ತು ಡಿಪ್ಲೊಮಾ ತೇರ್ಗಡೆಯಾದವರಿಗೆ 1,500 ರೂ. ನಿರುದ್ಯೋಗ ಭತ್ಯೆಯನ್ನು 2 ವರ್ಷದವರೆಗೆ ನೀಡಲಾಗುವುದು.

Ashika S

Recent Posts

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

14 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

27 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

44 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

52 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

1 hour ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

1 hour ago