ಬೆಳಗಾವಿ: ಎರಡನೇ ತರಗತಿ ವಿದ್ಯಾರ್ಥಿನಿಯ ಅಪಹರಣಕ್ಕೆ ಪ್ರಯತ್ನಿಸಿದ್ದು, ಅದು ವಿಫಲವಾಗಿರುವ ಘಟನೆ ಚಿಕ್ಕೋಡಿ ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿ ನಡೆದಿದೆ.
ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿದ್ದಾರೆ.
ಶಾಲೆ ಕಾಂಪೌಂಡ್ ಬಳಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕುಳಿತ ಕಿಡ್ನಾಪರ್ಸ್ ವಿದ್ಯಾರ್ಥಿನಿ ಬರುವುದನ್ನೇ ಕಾಯುತ್ತಿದ್ದ.
ಶಾಲೆಯಿಂದ ವಿದ್ಯಾರ್ಥಿನಿ ಹೊರ ಬರುತ್ತಿದ್ದಂತೆ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಾಲಕಿಯನ್ನು ಅಪಹರಿಸಿ 200 ಮೀಟರ್ ಓಡಿದ್ದಾನೆ. ಬಳಿಕ ವಿದ್ಯಾರ್ಥಿ ವ್ಯಕ್ತಿಯ ಕೈಗೆ ಕಚ್ಚಿ ಆತನಿಂದ ತಪ್ಪಿಸಿಕೊಂಡು ಬಂದಿದ್ದಾಳೆ. ನಂತರ ವಿದ್ಯಾರ್ಥಿನಿ ಕಿರುಚಾಟದಿಂದ ವ್ಯಕ್ತಿ ಸ್ಥಳದಿಂದ ಓಡಿ ಹೋಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲಾ ಆವರಣದ ಸಿಸಿಟಿವಿ ಪರಿಶೀಲನೆ ನಡೆಸಿ ಮಕ್ಕಳ ಕಳ್ಳರ ಕುರಿತು ಪೊಲೀಸ್ ಪ್ರಕಟಣೆ ಜಾರಿ ಮಾಡಿದ್ದಾರೆ.
ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.