ಬೆಳಗಾವಿ: ನಗರದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಗರದ 22 ಶಾಲೆಗಳಿಗೆ ರಜೆ ಘೋಷಿಸಿದೆ.
ಅಧಿಕಾರಿಗಳ ಪ್ರಕಾರ, ಈ ಚಿರತೆ ನಗರದ ಗಾಲ್ಫ್ ಕೋರ್ಸ್ನಲ್ಲಿ ಕಾಣಿಸಿಕೊಂಡಿದೆ. ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ಭಾನುವಾರ ಸಂಜೆ ಗಾಲ್ಫ್ ಕೋರ್ಸ್ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಇಂದು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ.