ಬೆಳಗಾವಿ: ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಕಾರಿನಲ್ಲಿದ್ದ ದಂಪತಿ ಸಿದ್ದಪ್ಪ ಹಾಗೂ ಸೀಮಾ ಕೊಣ್ಣೂರ್ ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ದಂಪತಿ ಬೆಳಗಾವಿಯಿಂದ ಧೂಪದಾಳಕ್ಕೆ ಕೆಲಸದ ನಿಮಿತ್ತ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಸಧ್ಯ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದು, ಕಾರನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ.
ಈ ಘಟನೆ ಅಂಕಲಗಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.