Categories: ಬೆಳಗಾವಿ

ಬೆಳಗಾವಿ: ಅಗಲಿದ ಗಣ್ಯರಿಗೆ ಉಭಯ ಸದನಗಳಲ್ಲಿ ಸಂತಾಪ

ಬೆಳಗಾವಿ: ಅಗಲಿದ ಗಣ್ಯರಿಗೆ ಸುವರ್ಣಸೌಧದದ ವಿಧಾನಸಭೆ ಮತ್ತು ವಿಧಾನಪರಿಷತ್ ನ ಉಭಯಸದನಗಳಲ್ಲಿ ಸಂತಾಪ ಸೂಚಿಸಲಾಯಿತು.

ವಿಧಾನಸಭೆಯ ಹಾಲಿ ಉಪಸಭಾಧ್ಯಕ್ಷರಾಗಿದ್ದ ಆನಂದ ಮಾಮನಿ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂಸಿಂಗ್ ಯಾದವ್, ರಾಜ್ಯಸಭೆ ಮಾಜಿ ಸದಸ್ಯ ಅಬ್ದುಲ್ ಸಮದ್ ಸಿದ್ದಿಕಿ, ಲೋಕಸಭೆ ಮಾಜಿ ಸದಸ್ಯ ಕೋಳೂರು ಬಸವನಗೌಡ, ಮಾಜಿ ಸಚಿವರಾಗಿದ್ದ ಜಬ್ಬಾರಖಾನ್ ಹೊನ್ನಳ್ಳಿ,ಸುಧೀಂದ್ರರಾವ್ ಕಸ್ಬೆ ಮತ್ತು ವಿಧಾನಸಭೆಯ ಮಾಜಿ ಸದಸ್ಯರುಗಳಾಗಿದ್ದ ಎನ್.ಟಿ.ಬೊಮ್ಮಣ್ಣ,ಶ್ರೀಶೈಲಪ್ಪ ಬಿದರೂರು, ಕುಂಬ್ಳೆ ಸುಂದರರಾವ್, ಶಂಕರಗೌಡ ಎನ್.ಪಾಟೀಲ್ ಅವರುಗಳು ನಿಧನ ಹೊಂದಿರುವುದಕ್ಕೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂತಾಪ ಸೂಚನೆ ಮಂಡಿಸಿ ನಿಧನ ಹೊಂದಿದ ಆನಂದ ಮಾಮನಿ ಸೇರಿದಂತೆ ಗಣ್ಯರ ಹೆಸರುಗಳನ್ನು ಪ್ರಸ್ತಾಪಿಸಿ ಅವರ ಜೀವನ,ಸಾಧನೆಗಳನ್ನು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಇದೇ ಸದನದ ಸದಸ್ಯರಾಗಿ ಉಪಸಭಾಧ್ಯಕ್ಷರಾಗಿದ್ದ ಆನಂದ ಮಾಮನಿ ಅವರು ಸಣ್ಣ ವಯಸ್ಸಿನಲ್ಲಿಯೇ ಸಾರ್ವಜನಿಕ ಜೀವನಕ್ಕೆ ಬಂದು ಅಲ್ಪಕಾಲದಲ್ಲಿಯೇ ಸಾಕಷ್ಟು ಸಾಧನೆ ಮಾಡಿದ್ರು, ಭವ್ಯ ಭವಿಷ್ಯಗಳು ಇವರಿಗೆ ಕಾದಿದ್ದವು;ಆದ್ರೇ ಅನಾರೋಗ್ಯ ಅವರನ್ನು ನಮ್ಮೊಂದಿಗೆ ಇಲ್ಲವಾಗಿಸಿತು ಎಂದರು.

ಅವರ ತಂದೆಯೂ ಸಹ ಇದೇ ಸದನದ ಉಪಸಭಾಧ್ಯಕ್ಷರಾಗಿದ್ದರು. ರೈಲಿನಲ್ಲಿ ಪಯಣಿಸುವಾಗ ತೊಂದರೆಯಾಗಿ ದಾರಿಮಧ್ಯೆಯೇ ತೀರಿಕೊಂಡಿದ್ರು. ಮಾಮನಿ ಮತ್ತು ತಮ್ಮ ಕುಟುಂಬದ ಸಂಬಂಧ ಹಾಗೂ ಒಡನಾಟವನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಮರಿಸಿದರು.

ಆನಂದ ಮಾಮನಿ ಅವರು ಅವರ ತಂದೆಯಂತೆ ಈ ಭಾಗದಲ್ಲಿ ಜನಪ್ರಿಯ ನಾಯಕರಾಗಿದ್ದರು ಮತ್ತು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಕ್ಷೇತ್ರದ ನೀರಾವರಿಯ ಬಗ್ಗೆ ವಿಶೇಷ ಒತ್ತು ನೀಡಿದ್ದ ಅವರು ಪ್ರತಿಯೋಜನೆಗಳ ಬಗ್ಗೆ ಸಂಪೂರ್ಣ ತಿಳಿದುಕೊಂಡಿದ್ರು ಮತ್ತು ಸರಕಾರದ ವ್ಯವಸ್ಥೆಯ ಬಗ್ಗೆ ತಿಳಿದುಕೊಂಡಿದ್ದರು. ಓರ್ವ ಮಾದರಿ ಶಾಸಕರು ಇವರಾಗಿದ್ದರು ಎಂದು ಹೇಳಿದ ಸಿಎಂ ಅವರು 2008ರಲ್ಲಿ ನಾವು ಮತ್ತು ಅವರು ಒಂದೇ ಬಾರಿಗೆ ಬಿಜೆಪಿಗೆ ಸೇರ್ಪಡೆಯಾಗಿ ಸತತವಾಗಿ ಮೂರು ಬಾರಿ ಆಯ್ಕೆಯಾಗುತ್ತಾ ಬಂದಿದ್ದಾರೆ ಎಂದರು.

ರಾಮಮನೋಹರ್ ಲೋಹಿಯಾ ಅವರ ತತ್ವಸಿದ್ಧಾಂತಗಳಿಂದ ಪ್ರಭಾವಿತರಾಗಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿದ್ದ ಮುಲಾಯಂಸಿಂಗ್ ಯಾದವ್ ಅವರು ಐದೂವರೆ ದಶಕ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಕೆಳಜಾತಿಗಳಿಗೆ ನೀಡಿದ ಮಹತ್ವ,ಅಲ್ಪಸಂಖ್ಯಾತರೆಡೆಗೆ ತೋರಿಸಿದ ಕಾಳಜಿಯಿಂದಾಗಿ ರಾಜಕೀಯ ವಲಯದಲ್ಲಿ ನೇತಾಜಿ ಎಂದೇ ಪ್ರಸಿದ್ಧರಾಗಿದ್ದರು.

10 ಬಾರಿ ಉತ್ತರ ಪ್ರದೇಶ ವಿಧಾನಸಭೆಗೆ,1 ಬಾರಿ ವಿಧಾನಪರಿಷತ್,07 ಬಾರಿ ಲೋಕಸಭೆಗೆ ಆಯ್ಕೆಯಾಗಿ, ವಿಧಾನಸಭೆಯ ವಿರೋಧಪಕ್ಷದ ನಾಯಕರಾಗಿ,ಮೂರು ಬಾರಿ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಅದ್ಭುತ ವ್ಯಕ್ತಿತ್ವದ ದೇಶದ ಹಿರಿಯ ರಾಜಕಾರಣಿ ಮುಲಾಯಂಸಿಂಗ್ ಯಾದವ ನಿಧನ ತುಂಬಲಾರದ ನಷ್ಟ ಎಂದರು.

ರಾಜ್ಯಸಭೆ ಮಾಜಿ ಸದಸ್ಯರಾಗಿದ್ದ ಅಬ್ದುಲ್ ಸಮದ್ ಸಿದ್ದಿಕಿ, ಲೋಕಸಭೆ ಮಾಜಿ ಸದಸ್ಯ ಕೋಳೂರು ಬಸವನಗೌಡ, ಮಾಜಿ ಸಚಿವರಾಗಿದ್ದ ಜಬ್ಬಾರಖಾನ್ ಹೊನ್ನಳ್ಳಿ, ಸುಧೀಂದ್ರರಾವ್ ಕಸ್ಬೆ ಮತ್ತು ವಿಧಾನಸಭೆಯ ಮಾಜಿ ಸದಸ್ಯರುಗಳಾಗಿದ್ದ ಎನ್.ಟಿ.ಬೊಮ್ಮಣ್ಣ, ಶ್ರೀಶೈಲಪ್ಪ ಬಿದರೂರು, ಕುಂಬ್ಳೆ ಸುಂದರರಾವ್, ಶಂಕರಗೌಡ ಎನ್.ಪಾಟೀಲ್ ಅವರುಗಳು ನಾಡಿಗೆ ನೀಡಿದ ಕೊಡುಗೆಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಮರಿಸಿದರು.

ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆನಂದ ಮಾಮನಿ, ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂಸಿಂಗ್ ಯಾದವ ಸೇರಿದಂತೆ ಅಗಲಿದ ಗಣ್ಯರೊಂದಿಗಿನ ಒಡನಾಟವನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಸಚಿವರಾದ ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸದನದ ಸದಸ್ಯರಾದ ಬಂಡೆಪ್ಪ ಕಾಶೆಂಪುರ, ಎಚ್.ಕೆ.ಪಾಟೀಲ್,ಯು.ಟಿ.ಖಾದರ್, ಜಿ.ಸೋಮಶೇಖರರೆಡ್ಡಿ, ವೆಂಕಟರಾವ್ ನಾಡಗೌಡ, ವಿ.ತುಕಾರಾಂ ಸೇರಿದಂತೆ ಅನೇಕರು ಅಗಲಿದ ಗಣ್ಯರ ಕುರಿತು ಮಾತನಾಡಿ ಅವರ ಒಡನಾಟ ಮತ್ತು ಸಾಧನೆಗಳನ್ನು ಸ್ಮರಿಸಿಕೊಂಡರು.

ನಂತರ ಒಂದು ನಿಮಿಷ ಸದನದ ಸದಸ್ಯರು ಎದ್ದುನಿಂತು ಮೌನಾಚರಣೆ ಮಾಡುವುದರ ಮೂಲಕ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ನಂತರ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿವೇಶನವನ್ನು ಡಿ.20ರ ಬೆಳಗ್ಗೆ 11ಕ್ಕೆ ಮುಂದೂಡಿದರು.

ವಿಧಾನಪರಿಷತ್ ನಲ್ಲಿಯೂ ಅಗಲಿದ ಗಣ್ಯರಿಗೆ ಸಂತಾಪ
ಸುವರ್ಣಸೌಧದ ವಿಧಾನಪರಿಷತ್ನಲ್ಲಿಯೂ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ವಿಧಾನಪರಿಷತ್ ಸಭಾಪತಿ ರಘುನಾಥ ಮಲ್ಕಾಪುರೆ ಅವರು ಸಂತಾಪ ಸೂಚನೆ ಮಂಡಿಸಿ ನಿಧನ ಹೊಂದಿದ ಆನಂದ ಮಾಮನಿ ಸೇರಿದಂತೆ ಗಣ್ಯರ ಹೆಸರುಗಳನ್ನು ಪ್ರಸ್ತಾಪಿಸಿ ಅವರ ಜೀವನ,ಸಾಧನೆಗಳನ್ನು ತಿಳಿಸಿದರು.

ಹಾಲಿ ವಿಧಾನಸಭೆಯ ಶಾಸಕರು ಹಾಗೂ ಉಪಸಭಾಧ್ಯಕ್ಷರಾಗಿದ್ದ ಆನಂದ ಮಾಮನಿ, ವಿಧಾನಪರಿಷತ್ ಮಾಜಿ ಸದಸ್ಯರು ಹಾಗೂ ಮಾಜಿ ಸಚಿವರಾಗಿದ್ದ ಜಬ್ಬಾರಖಾನ್ ಹೊನ್ನಳ್ಳಿ, ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು, ವಿಧಾನಪರಿಷತ್ ಮಾಜಿ ಸದಸ್ಯರಾದ ಎಸ್.ಎಸ್.ಪೂಜಾರಿ, ವಿಧಾನಸಭೆಯ ಮಾಜಿ ಸದಸ್ಯರು ಹಾಗೂ ಮಾಜಿ ಸಚಿವರಾದ ಸುಧೀಂದ್ರರಾವ್ ಕಸಬೆ, ಲೋಕಸಭೆ ಮಾಜಿ ಸದಸ್ಯರಾದ ಕೋಳೂರು ಬಸವನಗೌಡ, ರಾಜ್ಯಸಭಾ ಮಾಜಿ ಸದಸ್ಯರಾದ ಅಬ್ದುಲ್ ಸಮದ್ ಸಿದ್ಧಿಖಿ, ಕನ್ನಡ ಚಲನಚಿತ್ರ ರಂಗದ ನಟರು ಹಾಗೂ ನಾಟಕಕಾರರಾದ ಲೋಹಿತಾಶ್ವ, ಭಾಗವತರು ಹಾಗೂ ಯಕ್ಷಗಾನ ಕಲಾವಿದರಾದ ಬಂಗಾರ್ ಆಚಾರ್, ಕೆರೆ ನಿರ್ಮಾತೃ ಕಲ್ಮನೆ ಕಾಮೇಗೌಡ ಹಾಗೂ ವೇದಾಂತ ವಿದ್ವಾನ್ ಆರ್.ಎಲ್.ಕಶ್ಯಪ್ ಅವರುಗಳ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ, ವಿಧಾನಪರಿಷತ್ ಮುಖ್ಯ ಸಚೇತಕ ಪ್ರಕಾಶ ರಾಠೋಡ, ರವಿಕುಮಾರ, ತೇಜಸ್ವಿನಿಗೌಡ, ಬಸವರಾಜ ಹೊರಟ್ಟಿ,ಪ್ರತಾಪ್ಸಿಂಗ್ ನಾಯ್ಕ, ಎಸ್.ವಿ.ಸಂಕನೂರು,ಚನ್ನರಾಜ ಬಸವರಾಜ ಹಟ್ಟಿಹೊಳಿ ಸೇರಿದಂತೆ ಅನೇಕರು ಮಾತನಾಡಿ ಅಗಲಿದ ಗಣ್ಯರೊಂದಿಗಿನ ಒಡನಾಟ ಹಾಗೂ ಅವರು ನಾಡಿಗೆ ನೀಡಿದ ಕೊಡಗೆಯನ್ನು ಸ್ಮರಿಸಿದರು.

ನಂತರ ಒಂದು ನಿಮಿಷ ಸದನದ ಸದಸ್ಯರು ಎದ್ದುನಿಂತು ಮೌನಾಚರಣೆ ಮಾಡುವುದರ ಮೂಲಕ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ನಂತರ ಸಭಾಪತಿಗಳು ಅಧಿವೇಶನವನ್ನು ಡಿ.20ರ ಬೆಳಗ್ಗೆ 11ಕ್ಕೆ ಮುಂದೂಡಿದರು.

Sneha Gowda

Recent Posts

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

10 mins ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

22 mins ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

34 mins ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

1 hour ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

2 hours ago