Categories: ಬೆಳಗಾವಿ

ಬೆಳಗಾವಿ: ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರಧನ ರೂ.15 ಲಕ್ಷಕ್ಕೆ ಹೆಚ್ಚಳ

ಬೆಳಗಾವಿ,ಡಿ.22: ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ರೂ.7.5 ಲಕ್ಷ ಪರಿಹಾರಧನವನ್ನು ರೂ.15 ಲಕ್ಷಕ್ಕೆ ಹೆಚ್ಚಳ ಮಾಡಿದೆ. ಕಾಡನೆ ಹಾವಳಿ ಹೆಚ್ಚಿರುವ ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಜ ಕಾರ್ಯಪಡೆ ರಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಗುರುವಾರ ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಪ್ರಾಣೇಶ್.ಎಂ.ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರು ಉತ್ತರಿಸಿದರು.

ಕಾಡಾನೆ ಹಾಗೂ ಇತರೆ ವನ್ಯಪ್ರಾಣಿಗಳು ಕಾಡಿನಿಂದ ಹೊರಬಾರದಂತೆ ತಡೆಯಲು ವನ್ಯಪ್ರಾಣಿಗಳಿಗಾಗಿ ಅರಣ್ಯ ಪ್ರದೇಶಗಳ ಒಳಗೆ ನೀರಿನ ಲಭ್ಯತೆ ಹೆಚ್ಚಿಸಲು ರಕ್ಷಿತ ಅರಣ್ಯಗಳಲ್ಲಿ ಕೆರೆಗಳ ನಿರ್ಮಾಣ ಹಾಗೂ ಇರುವ ಕೆರೆಗಳ ಪುನಶ್ಚೇತನಗೊಳಿಸಲಾಗಿದೆ.

ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ, ಕಂದಕ ಹಾಗೂ ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಇದುವರೆಗೂ 762 ಕಿ.ಮೀ ಆನೆ ತಡೆ ಕಂದಕ, 1106 ಕಿ.ಮೀ ಸೌರಶಕ್ತಿ ಬೇಲಿ, 100 ಕಿ.ಮೀ ರೈಲ್ವೆ ಹಳಿ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 150.95 ಕಿ.ಮೀ ಆನೆ ತಡೆ ಕಂದಕ, 285.88 ಕಿ.ಮೀ. ಸೌರಶಕ್ತಿ ಬೇಲಿ ಮತ್ತು 71.768 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. 95 ಹಿಮ್ಮೆಟ್ಟಿಸುವ ಹಾಗೂ 33 ಕ್ಷಿಪ್ರ ಸ್ಪಂದನ ತಂಡ ರಚಿಸ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ವೈರ್ ಲೆಸ್ ಕಾಡಾನೆಗಳ ಮಾಹಿತಿ ಸಂಗ್ರಹಿಸಿಲು 24 ಗಂಟೆ ನಿರ್ವಹಿಸುವ ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದೆ.

ಕಾಡು ಪ್ರಾಣಿಯಿಂದ ಉಂಟಾಗುವ ಶಾಶ್ವತ ಅಂಗವಿಕಲತೆಗೆ ನೀಡಿತ್ತಿದ್ದ ಪರಿಹಾರಧನ ಮೊತ್ತವನ್ನು ರೂ.5 ರಿಂದ ರೂ.10 ಲಕ್ಷಕ್ಕೆ, ಭಾಗಶಃ ಅಂಗವಿಕಲತೆ ಮೊತ್ತವನ್ನು ರೂ.2.50 ಲಕ್ಷದಿಂದ ರೂ.5ಲಕ್ಷಕ್ಕೆ, ಗಾಯಗೊಂಡವರಿಗೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.30 ಸಾವಿರದಿಂದ ರೂ.60 ಸಾವಿರಕ್ಕೆ, ಆಸ್ತಿ ನಷ್ಟದ ಮೊತ್ತವನ್ನು ರೂ.10 ಸಾವಿರದಿಂದ ರೂ.20 ಸಾವಿರಕ್ಕೆ ಹಾಗೂ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಧನಾತ್ಮಕ ಪರಿಹಾರದ ಜೊತೆಗೆ 5 ವರ್ಷದ ಅವಧಿ ನೀಡುತ್ತಿದ್ದ ಮಾಶಾಸನ ಮೊತ್ತ ರೂ.2 ಸಾವಿರವನ್ನು ರೂ.4 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

25 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

39 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

52 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago