ಬೆಳಗಾವಿ: ಬೆಳಗಾವಿ ಅಧಿವೇಶನ ಸಂಧರ್ಬದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ, ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ಪೊಲೀಸ್ ಕಮಾಂಡ್ ಕಂಟ್ರೋಲ್ ಕೇಂದ್ರ ಸ್ಥಾಪಿಸಲಾಗಿದ್ದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ಇಂದು ವೀಕ್ಷಣೆ ನಡೆಸಿದರು.
ರಾಜ್ಯ ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಶ್ರೀ ಬೋರಲಿಂಗಯ್ಯ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.