Categories: ಬೆಳಗಾವಿ

ಬೆಳಗಾವಿ: ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ- ರಮೇಶ್ ಜಾರಕಿಹೋಳಿ

ಬೆಳಗಾವಿ: ನಾನು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು ನಿಜ. ಆದರೆ ನಾನು ಜೆಡಿಎಸ್ ಸೇರುತ್ತೇನೆ ಎಂಬ ಊಹಾಪೋಹಗಳಲ್ಲಿ ಯಾವುದೇ ಹುರುಳಿಲ್ಲ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೋಳಿ ಹೇಳಿದ್ದಾರೆ.

ನಗರದಲ್ಲಿ ನ.19ರ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಕಾಂಗ್ರೆಸ್ ನಲ್ಲಿ ಸಚಿವರಾಗಿದ್ದರೂ ಅದನ್ನು ತೊರೆದು ಬಿಜೆಪಿ ಸೇರಿ ಸರ್ಕಾರ ರಚಿಸಿದ್ದಾಗಿ ತಿಳಿಸಿದರು. ಈಗ ನಾನು ಯಾರ ಬಳಿಯೂ ಹೋಗಿ ನನ್ನನ್ನು ಮತ್ತೆ ಮಂತ್ರಿಯನ್ನಾಗಿ ಮಾಡುವಂತೆ ವಿನಂತಿಸಿಕೊಂಡಿಲ್ಲ. ಅಂತಹ ಯಾವುದೇ ಬೇಡಿಕೆ ಇಲ್ಲ ಎಂದು ಅವರು ಹೇಳಿದರು.

“ಬಿಜೆಪಿ ನಾಯಕರು ನನ್ನನ್ನು ಸಚಿವರನ್ನಾಗಿ ಮಾಡಲಿ ಬಿಡಲಿ, ನಾನು ಪಕ್ಷವನ್ನು ತೊರೆಯುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸಲು ನಾನು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ. ೨೦೨೩ ರ ಚುನಾವಣೆಯ ಸಾಲಿನಲ್ಲಿ ಪಕ್ಷವು ನನಗೆ ಪ್ರಮುಖ ಜವಾಬ್ದಾರಿಯನ್ನು ನೀಡಲಿದೆ. ನಾನು ಅದನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ” ಎಂದು ಅವರು ಹೇಳಿದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

2 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago