News Karnataka Kannada
Monday, April 22 2024
Cricket
ಬೆಳಗಾವಿ

ಬೆಳಗಾವಿ: ನಾಪತ್ತೆಯಾಗಿದ್ದ ಜೈನ ಮುನಿಗಳ ಹತ್ಯೆ

Missing Jain sages killed
Photo Credit : News Kannada

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈನ ಮುನಿಗಳು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ.

ಜು.5ರ ರಾತ್ರಿ ಆಶ್ರಮದ ಕೋಣೆಯಲ್ಲಿದ್ದ ಮುನಿಗಳು, ಜು.6 ರಂದು ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಭಕ್ತರು ಜೈನ ಬಸದಿಯ ಸುತ್ತಮುತ್ತ ಹುಡುಕಾಟ ನಡೆಸಿದ್ದರು. ಆದರೆ, ಎಲ್ಲಿಯೂ ಪತ್ತೆಯಾಗದ ಹಿನ್ನಲೆ ಆಚಾರ್ಯ ಕಾಮಕುಮಾರನಂದಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭೀಮಪ್ಪ ಉಗಾರೆ ಅವರು ಚಿಕ್ಕೋಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು