Categories: ಬೆಳಗಾವಿ

ಬೆಳಗಾವಿ: ಜನವರಿ 12 ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ

ಬೆಳಗಾವಿ: ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದು, ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯಕ್ಕೆ ಈ ಅವಕಾಶ ದೊರೆತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಯುವ ಸಬಲೀಕರಣ ಸಚಿವ ಅನುರಾಗ್ ಠಾಕೂರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದರು.

ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕ್ರೀಡಾ ಸಚಿವರಾದ ನಾರಾಯಣಗೌಡರು, ಕಂದಾಯ ಸಚಿವ ಆರ್. ಅಶೋಕ್, ನಗರಾಭಿವೃದ್ಧಿ ಸಚಿವ ಬಸವರಾಜ ಬೈರತಿ, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಇಲಾಖಾ ಕಾರ್ಯದರ್ಶಿಗಳೂ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಕೋವಿಡ್ ನಿಯಂತ್ರಣ ಸಭೆ :

ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು  ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.

Ashika S

Recent Posts

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

4 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

21 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

35 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

51 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

2 hours ago