ಬೆಳಗಾವಿ

ಬೆಳಗಾವಿ: ಸಿದ್ದರಾಮೋತ್ಸವವನ್ನು ಪಕ್ಷದಿಂದ ಮಾಡುತ್ತಿಲ್ಲ ಎಂದ ಸತೀಶ ಜಾರಕಿಹೊಳಿ

ಬೆಳಗಾವಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ ಸಿದ್ದರಾಮೋತ್ಸವವನ್ನು ಪಕ್ಷದಿಂದ ಮಾಡುತ್ತಿಲ್ಲ. ಪಕ್ಷದ ಹೊರಗೆ ಮಾಡಲಾಗುತ್ತಿದೆ. ಸಿದ್ದರಾಮೋತ್ಸವಕ್ಕೂ ಕಾಂಗ್ರೆಸ್‌ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮೋತ್ಸವವನ್ನು ವೈಯಕ್ತಿಕ ಕಾರ್ಯಕ್ರಮ. ಅವರ ಅಭಿಮಾನಿಗಳು ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಹಾಗಾಗಿ ಇದನ್ನು ವಿರೋಧಿಸುವ ಪ್ರಶ್ನೆಯೇ ಸೃಷ್ಟಿಯಾಗಲ್ಲ ಎಂದು ಹೇಳಿದರು.

ಸಿದ್ದರಾಮೋತ್ಸವ ಕೇವಲ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಸೀಮಿತವಾಗಿದೆ ಅಷ್ಟೇ. ಸಿದ್ದರಾಮೋತ್ಸವದ ಸ್ವಾಗತ ಸಮಿತಿಯಲ್ಲಿ ನಾನು ಕೂಡ ಇದ್ದೇನೆ ಕಾರ್ಯಕರ್ತರು ಇರುತ್ತಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೂ ಆಹ್ವಾನ ನೀಡಲಾಗಿದ್ದು, ಅವರು ಕೂಡ ಬರಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

 

Gayathri SG

Recent Posts

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

7 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

35 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

59 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

1 hour ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

2 hours ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

2 hours ago